ಶೋಭಾ ಕರಂದ್ಲಾಜೆಯಿಂದ ಕಾಂಗ್ರೆಸ್ ಕಾರ್ಯಕರ್ತೆಯ ಮೇಲೆ ಹಲ್ಲೆಗೆ ಯತ್ನ

ಚಿಕ್ಕಮಗಳೂರು

    ದೇಶದಲ್ಲಿ ಆಗುತ್ತಿರುವ ಬೆಲೆ ಏರಿಕೆ ಖಂಡಿಸಿ ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಶೋಭಾ ಕರಂದ್ಲಾಜೆ ಅವರು  ಮಹಿಳಾ ಕಾಂಗ್ರೆಸ್ ನಾಯಕಿಯೊಬ್ಬರ ಮೇಲೆ ಹಲ್ಲೆ ಯತ್ನ ನಡೆಸಿದ್ದಾರೆ ಎಂಬ ಆರೋಪ ರಾಜಕೀಯ ವಲಯದಲ್ಲಿ ಮಿಂಚಿನಂತೆ ಹರಿದಾಡಿದೆ. ಈರುಳ್ಳಿ, ಅಡುಗೆ ಅನಿಲ ಇನ್ನೂ ಮುಂತಾದ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಚಿಕ್ಕಮಗಳೂರಿನ ಜಿಲ್ಲಾ ಪಂಚಾಯತ್ ಎದುರು ಮಹಿಳಾ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ಕೈಗೊಂಡಿದ್ದರು.

    ಈ ಸಂದರ್ಭ ಅಲ್ಲಿಗೆ ಆಗಮಿಸಿದ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಸದಸ್ಯೆಯೊಬ್ಬರು ಈರುಳ್ಳಿ ಹಾರ ಹಾಕಲು ಮುಂದಾಗಿದ್ದರು ಆಗ ಶೋಭಾ ಅವರು ಅವರನ್ನು ದೂರ ತಳ್ಳಿ ಮುನ್ನಡೆದ ಘಟನೆ ನಡೆದಿದೆ , ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ನಗೀನಾ ಎಂಬುವವರ ಮೇಲೆ ಹಲ್ಲೆಗೆ ಯತ್ನ ನಡೆದಿದೆ ಎಂದು ಶೋಭಾ ಕರಂದ್ಲಾಜೆ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ