ಬೆಂಗಳೂರು
ತಮ್ಮ ವಿರುದ್ಧ – ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದು ಪಡಿಸುವಂತೆ ನಟಿ ಶೃತಿಹರನ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದಿನ ವಾರಕ್ಕೆ ಮುಂದೂಡಿದೆ.
ಪ್ರಕರಣ ರದ್ದುಪಡಿಸುವಂತೆ ಶೃತಿಹರಿಹರನ್ ಪರ ವಕೀಲರು ತುರ್ತಾಗಿ ಅರ್ಜಿಯ ವಿಚಾರಣೆ ನಡೆಸಬೇಕು ಎಂದು ಮಾಡಿದ ಮನವಿಯನ್ನು ತಿರಸ್ಕರಿಸಿದ ನ್ಯಾಯಪೀಠ ಮುಂದಿನ ವಾರ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ಹೇಳಿದೆ.
ಸಾಮಾಜಿಕ ಜಾಲತಾಣಗಳಲ್ಲಿ ನಟ ಅರ್ಜುನ್ ಸರ್ಜಾ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆಗಳನ್ನು ಪೊಸ್ಟ್ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಅರ್ಜುನ್ ಸರ್ಜಾ ಮ್ಯಾನೇಜರ್ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು.ಈ ಸಂಬಂಧ ಶೃತಿ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಇದನ್ನು ರದ್ದುಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ