ಸಿಎಂ ಬಿ ಎಸ್ ವೈ ಗೆ ಸಿದ್ದರಾಮಯ್ಯ ಸಲಹೆ..!

ಬೆಂಗಳೂರು

ರಾಜ್ಯದ ಆರ್ಥಿಕ ಪರಿಸ್ಥಿತಿ ದೃಷ್ಟಿಯಿಂದ ಹಸಿರು ವಲಯದಲ್ಲಿ ಮದ್ಯದಂಗಡಿಗಳನ್ನು ತೆರೆಯಬೇಕು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಲಾಕ್ ಡೌನ್ ಜಾರಿಯಲ್ಲಿರುವ ಮೇ 3 ರ ನಂತರ ಮದ್ಯದಂಗಡಿಗಳನ್ನು ತೆರೆಯುವ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚಿಂತನೆ ನಡೆಸುತ್ತಿರುವ ಬೆನ್ನಲ್ಲೇ ಸಿದ್ದರಾಮಯ್ಯ ಸಹ ಸಲಹೆ ನೀಡಿರುವುದು ಮಹತ್ವದ ಬೆಳವಣಿಗೆಯಾಗಿದೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್‍ನಿಂದಾಗಿ ರಾಜ್ಯದ ಆದಾಯಕ್ಕೆ ದÀಕ್ಕೆಯಾಗಿದೆ. ತೀವ್ರ ಅರ್ಥಿಕ ಸಮಸ್ಯೆ ಎದುರಾಗಿದೆ. ಅಬಕಾರಿ ಸುಂಕ ಬಂದರೆ ರಾಜ್ಯದ ಆರ್ಥಿಕತೆ ಸ್ವಲ್ಪ ಮಟ್ಟಿಗಾದರೂ ಸುಧಾರಿಸಬಹುದು. ಹೀಗಾಗಿ ಈಗಾಗಲೇ ಗುರುತಿಸಲಾಗಿರುವ ಹಸಿರು ವಲಯದ ಜಿಲ್ಲೆಗಳಲ್ಲಿ ಮದ್ಯದ ಅಂಗಡಿಗಳನ್ನು ಆರಂಭ ಮಾಡಿದರೆ ಒಳ್ಳೆಯದು ಎಂದರು. ಷರತ್ತುಗಳನ್ನು ವಿಧಿಸಿ ಮದ್ಯಗಂಡಿಗಳನ್ನು ತೆರೆಯಲು ಅವಕಾಶ ಕಲ್ಪಿಸಬಹುದು. ಮದ್ಯದಂಗಡಿ ತೆರೆದರೆ ಅಬಕಾರಿ ಆದಾಯ ಹೆಚ್ಚಾಗಲಿದೆ. ರಾಜ್ಯದ ಆರ್ಥಿಕ ದೃಷ್ಟಿಯಿಂದ ಇದು ಒಳ್ಳೆಯ ಬೆಳವಣಿಗೆ ಎಂದು ಸಿದ್ದರಾಮಯ್ಯ ಸಲಹೆ ಮಾಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link