ಬೆಂಗಳೂರು
ಮಾಜಿ ಸಿಎಂ ಸಿದ್ದರಾಮಯ್ಯ ನಾಳೆ ದೆಹಲಿಗೆ ತೆರಳಲಿದ್ದಾರೆ. ಗುರುವಾರ ನಡೆಯುವ ಮಹತ್ವದ ಸಭೆಯಲ್ಲಿಅವರು ಭಾಗವಹಿಸಲಿದ್ದಾರೆ.ಗುರುವಾರ ಬೆಳಗ್ಗೆ 11 ಗಂಟೆಗೆ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿಅಧ್ಯಕ್ಷತೆಯಲ್ಲಿ ನಡೆಯುವಕಾಂಗ್ರೆಸ್ ಸಮಿತಿಅಧ್ಯಕ್ಷರು ಹಾಗೂ ಶಾಸಕಾಂಗ ನಾಯಕರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮಹಾತ್ಮಗಾಂಧಿಯವರ 150ನೇ ಜನ್ಮದಿನಾಚರಣೆ ಹಾಗೂ ಪಕ್ಷದ ಸದಸ್ಯತ್ವ ನೋಂದಣಿ ಸೇರಿದಂತೆ ಮತ್ತಿತರ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದ್ದು, ವಿವಿಧ ರಾಜ್ಯಗಳಿಂದ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್‍ಕೂಡ ಸೆ.12ರಂದು ದೆಹಲಿಗೆ ತೆರಳಲಿದ್ದು, ಅವರುಕೂಡ ಈ ಸಭೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ. ಜೊತೆಗೆಅವರು, ಅತ್ಯಂತ ಪ್ರಮುಖವಾಗಿರಾಜ್ಯದಲ್ಲಿ ನೇಮಕವಾಗಬೇಕಿರುವ ಸ್ಥಾನಗಳ ಭರ್ತಿ ಸಂಬಂಧ ಸಮಾಲೋಚಿಸಲು ತೆರಳುತ್ತಿದ್ದಾರೆ ಎಂದು ಹೇಳಲಾಗ್ತಿದೆ. ಪ್ರತಿಪಕ್ಷದ ನಾಯಕರಆಯ್ಕೆ ಸೇರಿದಂತೆ ವಿವಿಧ ಹುದ್ದೆಗಳಿಗೆ ಕಾಂಗ್ರೆಸ್ನಲ್ಲಿ ನೇಮಕವಾಗಬೇಕಿದೆ. ಆಕಾಂಕ್ಷಿಗಳ ಪಟ್ಟಿಯೊಂದಿಗೆ ದಿನೇಶ್‍ಗುಂಡೂರಾವ್ ತೆರಳುತ್ತಿದ್ದು, ಪಕ್ಷದ ಹೈಕಮಾಂಡ್ ನಾಯಕರು, ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೊಂದಿಗೆ ಚರ್ಚಿಸಿ ಅಂತಿಮ ಪಟ್ಟಿಯೊಂದಿಗೆರಾಜ್ಯಕ್ಕೆ ವಾಪಸಾಗಲಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ