ಬೆಂಗಳೂರು
ಖಾಸಗಿ ರೆಸಾರ್ಟ್ ನಲ್ಲಿ ಕಾಂಗ್ರೆಸ್ ಶಾಸಕರು ಮದ್ಯ ಸೇವಿಸಿ ಹಲ್ಲೆ ನಡೆಸಿರುವ ಪ್ರಕರಣದಿಂದ ರಾಜ್ಯದ ಇಡೀ ಶಾಸಕರು ತಲೆ ತಗ್ಗಿಸುವಂತಾಗಿದೆ.ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ ಈ ಬಗ್ಗೆ ಉತ್ತರ ನೀಡಬೇಕು ಎಂದು ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಗ್ರಹಿಸಿದ್ದಾರೆ.
ಡಾಲರ್ಸ್ ಕಾಲೋನಿಯ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕರು ಕುಡಿದು ಬಡಿದಾಡಿ ಕೊಂಡಿದ್ದಾರೆ.ಈ ಪ್ರಕರಣ ರಾಜ್ಯದ 224 ಶಾಸಕರು ತಲೆ ತಗ್ಗಿಸುವಂತ ವಿಚಾರವಾಗಿದೆ.ಆದರೆ ಕಾಂಗ್ರೆಸ್ ನಾಯಕರು ಏನೂ ನಡೆದೇ ಇಲ್ಲವೆಂಬಂತೆ ಹೇಳಿಕೆ ನೀಡುತ್ತಿದ್ದಾರೆ. ಶಾಸಕಾಂಗ ನಾಯಕ ಸಿದ್ದರಾಮಯ್ಯ ಈ ಬಗ್ಗೆ ಸ್ಪಷ್ಟ ಉತ್ತರ ನೀಡಬೇಕು.ಪೊಲೀಸರು ಪ್ರಕರಣ ಸಂಬಂಧ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು.ಪ್ರಕರಣದಲ್ಲಿ ಯಾರೇ ತಪ್ಪಿತಸ್ಥರಾದರೂ ಅವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು. ಮುಂಬೈ ಕಾರ್ಯಕ್ರಮಕ್ಕೆ ತೆರಳಿದ ಆನಂದ್ ಸಿಂಗ್ ಕುಟುಂಬದ ಸದಸ್ಯರು ಆತಂಕದಲ್ಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.
ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಸುಧಾರಿಸದ ಹಿನ್ನೆಲೆಯಲ್ಲಿ ತಾವು ಇಂದು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ನಾಳೆಯಿಂದ ಮೂರು ದಿನಗಳ ಕಾಲ ಬರ ಅದ್ಯಯನ ಪ್ರವಾಸ ಕೈಗೊಳ್ಳುತ್ತಿರುವುದಾಗಿ ಅವರು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ