ಬೆಂಗಳೂರು
ಸಿದ್ದರಾಮಯ್ಯನವರ ಅದೃಷ್ಠದ ನಿವಾಸ ಎಂದೇ ಕರೆಲಾಗುವ ‘ಕಾವೇರಿ’ಯನ್ನು ಖಾಲಿ ಮಾಡಲು ನಾಲ್ಕು ದಿನಗಳ ಗಡುವು ನೀಡಲಾಗಿದೆ ಎಂದು ತಿಳಿದು ಬಂದಿದೆ .
ಹಾಲಿ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾ ಪಕ್ಕದ ಇರುವ ಕಾವೇರಿ ನಿವಾಸವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಹಂಚಿಕೆ ಮಾಡಲಾಗಿದ್ದು. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ನಾಲ್ಕು ದಿನದಲ್ಲಿ ನಿವಾಸ ಖಾಲಿ ಮಾಡದಿದ್ದರೆ ನೀರು, ವಿದ್ಯುತ್ ಸಂಪರ್ಕ ಕಡಿತಗೊಳಿಸುವುದಾಗಿ ಸಿದ್ದರಾಮಯ್ಯಗೆ ಮೌಖಿಕ ಎಚ್ಚರಿಕೆ ನೀಡಿದೆ ಎನ್ನಲಾಗಿದೆ. ಇದರಿಂದಾಗಿ ಸಿದ್ದರಾಮಯ್ಯ ಅವರಿಗೆ ಅನಿವಾರ್ಯವಾಗಿ ಕಾವೇರಿ ತೊರೆಯುವ ಅನಿವಾರ್ಯತೆಯಲ್ಲಿ ಸಿಲುಕಿದ್ದಾರೆ.
ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ದಿನದಿಂದ ಕಾವೇರಿಯಲ್ಲಿ ವಾಸ್ತವ್ಯ ಹೂಡಿದ್ದಾರೆ. 2018ರ ವಿಧಾನಸಭೆ ಚುನಾವಣೆ ಬಳಿಕ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದರೂ ಸಿದ್ದರಾಮಯ್ಯ ಕಾವೇರಿಯಲ್ಲಿಯೇ ಮುಂದುವರೆದಿದ್ದರು.








