ಸಿ ಟಿ ರವಿ ಗೆ ತಿರುಗೇಟು ನೀಡಿದ ಸಿದ್ದರಾಮಯ್ಯ..!

ಬೆಂಗಳೂರು

    ಮುಖ್ಯಮಂತ್ರಿ ಹುದ್ದೆಯಿಂದ ಅಧಿಕಾರ ಕಳೆದುಕೊಂಡ ಬಳಿಕ ಮಾನಸಿಕ ಅಸ್ವಸ್ಥರಾಗಿದ್ದೀರಿ ಎನ್ನುವ ಸಚಿವ ಸಿ,ಟಿ ರವಿ ಹೇಳಿಕೆಗೆ ತೀಷ್ಣವಾಗಿ ಪ್ರತಿಕ್ರತಿಸಿರುವ ವಿಧಾನಸಭೆ ವಿರೋದ ಪಕ್ಷದ ನಾಯಕ ಸಿದ್ದರಾಮಯ್ಯ, ಇತಿಹಾಸ ಓದಿಕೊಂಡು, ಸತ್ಯ ತಿಳಿದುಕೊಂಡೇ ಮಾತನಾಡುತ್ತೇವೆ ತಿರುಗೇಟು ನೀಡಿದ್ಧಾರೆ.

      ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹತ್ಯೆಯ ಆರೋಪಿಗಳಿಗೆ ಭಾರತ ರತ್ನ ಕೊಡುವುದಾದರೆ ಕುಡಿದ ಮತ್ತಿನಲ್ಲಿ ಕಾರು ಅಪಘಾತ ನಡೆಸಿ ಅಮಾಯಕರ ಸಾಯಿಸಿದವರಿಗೂ ಕನಿಷ್ಠ ರಾಜ್ಯೋತ್ಸವ ಪ್ರಶಸ್ತಿಯನ್ನಾದರೂ ಕೊಡಬೇಕಪ್ಪಾ! ಎಂದು ವ್ಯಂಗ್ಯವಾಡಿದ್ದಾರೆ, ಅಧಿಕಾರ ಇಲ್ಲದಾಗ ಮಾನಸಿಕ ಕಾಯಿಲೆಯಿಂದ ನರಳುವವರು ಕಂಠಪೂರ್ತಿ ಕುಡಿದು ಕಾರು ಅಪಘಾತ ಮಾಡಿ ಅಮಾಯಕರನ್ನು ಸಾಯಿಸುತ್ತಾರೆ ಎಂದು ಟ್ವಿಟ್ಟರ್ ಮೂಲಕ ಸಿ.ಟಿ ರವಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

      ನಮ್ಮಂತಹವರು ರಾಜಕೀಯದ ಮಧ್ಯೆ ಬಿಡುವು ಮಾಡಿಕೊಂಡು ಇತಿಹಾಸ ಓದಿ,ಸತ್ಯ ತಿಳಿದುಕೊಂಡು ಮಾತಾಡುತ್ತೇವೆ ಎಂದು ತಮ್ಮ ಆರೋಪಕ್ಕೆ ಸಿದ್ದರಾಮಯ್ಯ ಸಮಜಾಯಿಷಿ ನೀಡಿದ್ದಾರೆ. ವೀರಸಾವರ್ಕರ್ ಅವರಿಗೆ ಭಾರತ ರತ್ನ ನೀಡಲು ಮುಂದಾಗಿರುವ ಕೇಂದ್ರ ಸರ್ಕಾರದ ಕ್ರಮವನ್ನು ಸಿದ್ದರಾಮಯ್ಯ ತೀವ್ರವಾಗಿ ವಿರೋಧಿಸಿ ಮಹಾತ್ಮ ಗಾಂಧೀಜಿ ಅವರ ಹತ್ಯೆಯ ಸಂಚುಕೋರರಿಗೆ ಭಾರತ ರತ್ನ ನೀಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದ್ದರು.

    ಇದಕ್ಕೆ ತಿರುಗೇಟು ಟ್ವಿಟ್ಟರ್‍ನಲ್ಲಿ ಪ್ರತಿಕ್ರಿಯಿಸಿದ್ದ ಸಚಿವ ಸಿ.ಟಿ ರವಿ, ಮಾನಸಿಕ ಆಸ್ಪತ್ರೆಗೆ ಯಾಕೆ ಹೋಗಬಾರದು ನಾವು ಅದಕ್ಕೆ ವ್ಯವ್ಯಸ್ಥೆ ಮಾಡುತ್ತೆವೆ. ರಾಷ್ಟ್ರೀಯ ವಾದಿಯ ಬಗ್ಗೆ ಆರೋಪ ಮಾಡಿದ್ದೀರಿ ಎಂದು ಟೀಕಿಸಿದ್ದರು. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಟ್ವಿಟ್ಟರ್ ಮೂಲಕ ತಿರುಗೇಟು ನೀಡಿದ್ದಾರೆ. ಮಹಾತ್ಮ ಗಾಂಧೀಜಿ ಹತ್ಯೆಗೆ ಸಂಚು ರೂಪಿಸಿದ್ದವರಲ್ಲಿ ಒಬ್ಬರಾಗಿದ್ದ ವೀರ ಸಾವರ್ಕರ್‍ಗೆ ಭಾರತ ರತ್ನ ನೀಡಲು ಮುಂದಾಗಿರುವ ಕೇಂದ್ರ ಸರ್ಕಾರದ ಕ್ರಮಕ್ಕೆ ಸಿದ್ದರಾಮಯ್ಯ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ  

 

Recent Articles

spot_img

Related Stories

Share via
Copy link
Powered by Social Snap