1.5 ಲಕ್ಷ ಅಂತರದಲ್ಲಿ ಸಿದ್ದೇಶ್ವರ್ ಗೆಲುವು ಖಚಿತ

ದಾವಣಗೆರೆ:

      ಪ್ರಧಾನಿ ಮೋದಿಯವರ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಏಕವಚನದಲ್ಲಿ ಮಾತನಾಡಿರುವುದು ಕಾಂಗ್ರೆಸ್‍ಗೆ ಶಾಪವಾಗಿ ಪರಿಣಮಿಸಲಿದ್ದು, ದಾವಣಗೆರೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಒಂದೂವರೆ ಲಕ್ಷ ಮತಗಳ ಅಂತರದಿಂದ ಗೆಲು ಸಾಧಿಸಲಿದ್ದಾರೆಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಯಶವಂತರಾವ್ ಜಾಧವ್ ತಿಳಿಸಿದ್ದಾರೆ.

        ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ದೇಶಕ್ಕೆ ನೀಡಿರುವ ಕೊಡುಗೆ ಹಾಗೂ ಸಂಸದ ಜಿ.ಎಂ.ಸಿದ್ದೇಶ್ವರ್ ಅವರು ತಂದಿರುವ ಅನುದಾನದ ಆಧಾರದ ಮೇಲೆ ಮತ ಕೇಳುತ್ತಿದ್ದೇವೆ. ನಾವು ನಮ್ಮ ನಾಯಕ ಮೋದಿ ಮುಖ ನೋಡಿ ಮತ ನೀಡಿ ಎಂಬುದಾಗಿ ಕೇಳುವುದರಲ್ಲಿ ತಪ್ಪೇನಿದೆ? ಕಾಂಗ್ರೆಸ್‍ನವರು ಅವರ ನಾಯಕರ ಮುಖ, ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ತೋರಿಸಿ ಮತ ಕೇಳಲಿ ಎಂದು ತಿರುಗೇಟು ನೀಡಿದರು.

       ನಮ್ಮ ಪಕ್ಷದ ಎಲ್ಲಾ ಮುಖಂಡರು ಕಳೆದ ಒಂದು ತಿಂಗಳಿನಿಂದ ಹಗಲು-ರಾತ್ರಿ ಎನ್ನದೇ, ಜಿಲ್ಲೆಯ 960 ಹಳ್ಳಿ ಹಾಗೂ ಎಲ್ಲಾ ಪಟ್ಟಣ ಪ್ರದೇಶಗಳಿಗೆ ಭೇಟಿ ನೀಡಿ, ಮನೆ-ಮನೆಗೂ ತೆರಳಿ ನಮ್ಮ ಸಾಧನೆಯ ಬಗ್ಗೆ ಮತದಾರರಿಗೆ ಮನವರಿಕೆ ಮಾಡಿಕೊಟ್ಟು ಮತಯಾಚಿಸಿದ್ದು, ಸಂಸದ ಜಿ.ಎಂ.ಸಿದ್ದೇಶ್ವರ್ ಅವರು ಪುನರ್ ಆಯ್ಕೆಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು.ಕಾಂಗ್ರೆಸ್‍ನ ನೀಚ ರಾಜಕಾರಣದಿಂದ ಬೇಸತ್ತಿರುವ ಜನತೆ ಈ ಬಾರಿಯೂ ಸಿದ್ದೇಶ್ವರ್ ಅವರಿಗೆ ಆಶೀರ್ವಾದ ಮಾಡಲಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದರು.

         ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿಗಳಾದ ಹೆಚ್.ಎನ್.ಶಿವಕುಮಾರ್, ಎನ್.ರಾಜಶೇಖರ್, ಮುಖಂಡರಾದ ಎಲ್.ಡಿ.ಗೋಣೆಪ್ಪ, ಹೇಮಂತಕುಮಾರ್, ಶಿವನಗೌಡ ಪಾಟೀಲ್, ಟಿಂಕರ್ ಮಂಜಣ್ಣ, ಆನಂದರಾಜ್ ಶಿಂಧೆ, ಶ್ರೀಕಾಂತ್, ಗುರು ಸೋಗಿ, ಶಶಿಕುಮಾರ್, ಕುಮಾರ್, ರಾಜು ಹಾಜರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap