ಮೈಸೂರು
ವಿಧಾನಸಭಾ ಚುನಾವಣೆಯಲ್ಲಿ ಎದುರಾಳಿಗಳಾಗಿ ಸ್ಪರ್ಧಿಸಿದ್ದ ಸಿದ್ದರಾಮಯ್ಯ ಮತ್ತು ಜಿ.ಟಿ.ದೇವೇಗೌಡ ಅವರು ಕೊನೆಗೂ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ.
ತಮ್ಮ ರಾಜಕೀಯ ಕರ್ಮ ಭೂಮಿಯಾದ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜಂಟಿಯಾಗಿ ಪ್ರಚಾರ ಕೈಗೊಳ್ಳಲಿದ್ದಾರೆ. ಈ ಬೆಳವಣಿಗೆ ಮೈಸೂರು-ಕೊಡಗು ಕ್ಷೇತ್ರದ ಚುನಾವಣೆ ಫಲಿತಾಂಶದ ಮೇಲೆ ಎಷ್ಟರಮಟ್ಟಿಗೆ ಪ್ರಭಾವ ಬೀರಬಹುದು ಎಂಬ ಚರ್ಚೆ ಕಾರಣವಾಗಿದೆ.
ಬೆಂಗಳೂರಿನಲ್ಲಿ ಕಳೆದ ವಾರ ನಡೆದ ಮಾತುಕತೆ ನಡೆಸಿದ್ದ ಇಬ್ಬರು ಒಂದೇ ವೇದಿಕೆ ಹಂಚಿಕೊಳ್ಳಲು ಒಪ್ಪಿಗೆ ಸೂಚಿಸಿದ್ದರು. ಮಂಡ್ಯ, ಹಾಸನ ಮತ್ತು ತುಮಕೂರು ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಗೆಲ್ಲಿಸಲು ಜೆಡಿಎಸ್ ಗೆ ಕಾಂಗ್ರೆಸ್‌ನ ಬೆಂಬಲ ಬೇಕಿದ್ದು. ಮೈಸೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸುವುದು ಜೆಡಿಎಸ್ ಗೆ ಅನಿವಾರ್ಯವಾಗಿದೆ. ಈ ಕಾರಣ ಜಿ.ಟಿ.ದೇವೇಗೌಡ ಅವರು ಪ್ರಚಾರಕ್ಕೆ ಇಳಿದಿದ್ದಾರೆ. ಬೆಳಗ್ಗೆಯಿಂದ ಸಂಜೆಯವರೆಗೆ ಕಡಕೊಳ, ಜಯಪುರ, ಇಲವಾಲ ಮತ್ತು ಸಿದ್ದಲಿಂಗಪುರದಲ್ಲಿ ಪ್ರಚಾರ ಸಭೆ ನಡೆಸಲು ಉದ್ದೇಶಿಸಲಾಗಿದೆ.