ಮೈಸೂರು;
ಮೈಸೂರು ಲೋಕಸಭಾ ಕ್ಷೇತ್ರದಲ್ಲಿನ ಅಭಿವೃದ್ಧಿ ವಿಚಾರ ಕುರಿತು ಬಿಜೆಪಿ ನಾಯಕರೊಂದಿಗೆ ಚರ್ಚೆಗೆ ಸಿದ್ಧ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಡತನ, ನಿರುದ್ಯೋಗ, ರೈತರ ಸಮಸ್ಯೆ ವಿಚಾರಗಳನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸಬೇಕು ಎಂದು ಹೇಳಿದರು.ತುಮಕೂರು ಲೋಕಸಭಾ ಕ್ಷೇತ್ರವನ್ನು ಮೈತ್ರಿ ಪಕ್ಷ ಜೆಡಿಎಸ್‍ಗೆ ಬಿಟ್ಟುಕೊಟ್ಟ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿನ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಜೊತೆ ಚರ್ಚಿಸುವುದಾಗಿ ಅವರು ತಿಳಿಸಿದರು.
ರಾಜ್ಯದ ಎಲ್ಲಾ 28 ಕ್ಷೇತ್ರಗಳಲ್ಲೂ ತಾವು ಪ್ರಚಾರ ಕಾರ್ಯ ಕೈಗೊಳ್ಳಲಿದ್ದು, ಮಂಡ್ಯ, ಹಾಸನ ಎಂಬುದಾಗಿ ಪ್ರತ್ಯೇಕಿಸುವ ಅಗತ್ಯವಿಲ್ಲ, ಮಂಡ್ಯ ಕ್ಷೇತ್ರದ ಅಭ್ಯರ್ಥಿ ಬಗ್ಗೆ ಕಾಂಗ್ರೆಸ್‍ನಲ್ಲಿ ಗೊಂದಲವಿಲ್ಲ, ಆ ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟುಕೊಡಲಾಗಿದೆ ಎಂದು ಅವರು ಪ್ರತಿಕ್ರಿಯಿಸಿದರು. ರಾಜ್ಯದಲ್ಲಿ ಕಾಂಗ್ರೆಸ್‍ನ ಪಾಲಿನ ಎಲ್ಲಾ 20 ಸ್ಥಾನಗಳಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಹೆಸರನ್ನು ಒಂದೇ ಹಂತದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಕಾಂಗ್ರೆಸ್-ಜೆಡಿಎಸ್ ಸಮನ್ವಯ ಸಮಿತಿ ಅಧ್ಯಕ್ಷರೂ ಆಗಿರುವ ಸಿದ್ದರಾಮಯ್ಯ ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
