ಬೆಂಗಳೂರು
ಮಾಜಿ ಸಂಸದ, ಬಿಜೆಪಿ ನಾಯಕ ಶ್ರೀ ರಾಮುಲು ಅವರ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಚಿತವಾಗಿ ಮಾತನಾಡಿರುವುದು ಖಂಡನೀಯ ಎಂದು ವಿಧಾನ ಸಭೆ ಪ್ರತಿ ಪಕ್ಷನಾಯಕ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಗದಗನಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಮೂರು ಲೋಕ ಸಭಾ ಹಾಗೂ ಎರಡು ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷ ಜಯಗಳಿಸಲಿದೆ ಎಂದು ಹೇಳಿದರು.
ಶ್ರೀರಾಮುಲು ಅವರ ಮೇಲಿನ ಟೀಕೆಗೆ ಜಮಖಂಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಶಾಸಕ ಕರುಣಾಕರ ರೆಡ್ಡಿ, ರಾಜಕಾರಣದಲ್ಲಿ ಟೀಕೆಗಳಿರಬೇಕು, ಆದರೆ ಪದಗಳನ್ನು ತಪ್ಪಾಗಿ ಬಳಸಬಾರದು ಎಂದು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ