ಪರಿಶಿಷ್ಟ ಜಾತಿ ವರ್ಗದ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಸಮಾಜ ಕಲ್ಯಾಣ ಪ್ರಾಮಾಣಿಕ ಸೇವೆ

ಚಳ್ಳಕೆರೆ

        ಬಡ ವರ್ಗದ ಮಕ್ಕಳ ಅದರಲ್ಲೂ ವಿಶೇಷವಾಗಿ ಪರಿಶಿಷ್ಟ ಜಾತಿ ವರ್ಗದ ಮಕ್ಕಳ ಶೈಕ್ಷಣಿಕ ಪ್ರಗತಿ ಹಿನ್ನೆಲೆಯಲ್ಲಿ ಅವರಿಗೆ ಶಿಕ್ಷಣ ನೀಡುವ ಜೊತೆಗೆ ಆಹಾರ ಹಾಗೂ ಆಶ್ರಯ ನೀಡುವ ಜವಾಬ್ದಾರಿಯನ್ನು ಸಮಾಜ ಕಲ್ಯಾಣ ಇಲಾಖೆ ವಹಿಸಿಕೊಂಡಿದೆ. ತಾಲ್ಲೂಕಿನ ಇಲಾಖೆಯ ಎಲ್ಲಾ ಕಾರ್ಯಕ್ರಮಗಳನ್ನು ಪಾರದರ್ಶಕವಾಗಿ ಜಾರಿಗೊಳಿಸಲಾಗುವುದು ಎಂದು ವಿಶ್ವಾಸವನ್ನು ನೂತನ ಸಮಾಜ ಕಲ್ಯಾಣಾಧಿಕಾರಿ ಜಿ.ಆರ್.ಮಂಜಪ್ಪ ತಿಳಿಸಿದರು.

         ಅವರು, ತಮ್ಮ ಕೆಎಎಸ್ ಪದವಿಯನ್ನು ಪೂರ್ಣಗೊಳಿಸಿ ಇಲಾಖೆಯ ಸಹಾಯಕ ನಿರ್ದೇಶಕರಾಗಿ ಆಯ್ಕೆಯಾಗಿ ಇದೇ ಮೊದಲ ಬಾರಿಗೆ ತಮ್ಮ ಸೇವೆಯನ್ನು ಚಳ್ಳಕೆರೆ ತಾಲ್ಲೂಕಿನ ಮೂಲಕ ಪ್ರಾರಂಭಿಸಿದ್ದು, ಇವರನ್ನು ಇಲ್ಲಿನ ದುಗ್ಗಾವರ ಎಲ್‍ಐಸಿ ರಂಗಸ್ವಾಮಿ ಅಭಿಮಾನಿ ಬಳಗ ಅಭಿನಂದಿಸಿದ್ದು, ಅಭಿನಂದನೆ ಸ್ವೀಕರಿಸಿ ಮಾತನಾಡಿದರು. ನಾನು ಶಿಕ್ಷಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುವ, ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯದ ಅಧಿಕಾರಿಯಾಗಿ ಹಲವು ವರ್ಷಗಳ ಕಾಲ ಕಾರ್ಯನಿರ್ವಹಿಸಿದ ನಂತರ ಕೆಎಎಸ್ ಪರೀಕ್ಷೆ ಬರೆದು ಉತ್ತೀರ್ಣನಾಗಿದ್ದು, ಪ್ರಸ್ತುತ ಇಲ್ಲಿನ ಸಮಾಜ ಕಲ್ಯಾಣ ಅಧಿಕಾರಿಯಾಗಿ ಕಾರ್ಯನಿರ್ವಹಿಸುವ ಭಾಗ್ಯ ನನಗೆ ಒದಗಿ ಬಂದಿದ್ದು ಸಂತಸ ತಂದಿದೆ. ಈ ಕಾರ್ಯವನ್ನು ಪ್ರಾಮಾಣಿಕ, ದಕ್ಷತೆಯಿಂದ ನಿರ್ವಹಿಸುವ ಭರವಸೆ ನೀಡಿದರು.

        ದುಗ್ಗಾವರ ಎಲ್‍ಐಸಿ ರಂಗಸ್ವಾಮಿ ಅಭಿಮಾನಿ ಬಳಗ ಅಧ್ಯಕ್ಷ ರಂಗಸ್ವಾಮಿ ಮಾತನಾಡಿ, ಚಳ್ಳಕೆರೆ ತಾಲ್ಲೂಕಿನ ಮೂಲಕ ತಮ್ಮ ಇಲಾಖೆಯ ಸೇವೆಯನ್ನು ಪ್ರಾರಂಭಿಸಿದ ಜಿ.ಆರ್ ಮಂಜಪ್ಪ ಇಲಾಖೆಯ ಬಗ್ಗೆ ಹೆಚ್ಚು ಮಾಹಿತಿಯನ್ನು ತಿಳಿದುಕೊಂಡಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ಇತ್ತೀಚಿನ ದಿನಗಳಲ್ಲಿ ಸರ್ಕಾರದ ಹಲವಾರು ಸೌಲಭ್ಯಗಳನ್ನು ಫಲಾನುಭವಿಗಳಿಗೆ ನೀಡುವಲ್ಲಿ ಯಶಸ್ಸಿಯಾಗಿದೆ. ಇಂತಹ ಸಂದರ್ಭದಲ್ಲಿ ಜಿ.ಆರ್.ಮಂಜಪ್ಪ ಸಹ ವಿಶೇಷ ಗಮನ ವಹಿಸಿ ಬರಪೀಡಿತ ಪ್ರದೇಶವಾದ ಈ ತಾಲ್ಲೂಕಿನ ಜನರಿಗೆ ಉತ್ತಮ ಪಾರದರ್ಶಕ ಆಡಳಿತ ನೀಡುವಂತಾಗಲಿ ಎಂದು ಶುಭ ಹಾರೈಸಿದರು.

         ಈ ಸಂದರ್ಭದಲ್ಲಿ ಬಳಗದ ಪದಾಧಿಕಾರಿಗಳಾದ ಬೇಕರಿ ವಿಜಯ್, ಶ್ರೀನಿವಾಸ್, ಗಾಯಕ ಕೆ.ಟಿ.ಮುತ್ತುರಾಜ್ ಮುಂತಾದವರು ಉಪಸ್ಥಿತರಿದ್ದರು

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap