ದಾವಣಗೆರೆ:
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಕಲಾಕುಂಚದ ಮಹಿಳಾ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತೆಯರಿಗಾಗಿ ಏರ್ಪಡಿಸಿದ್ದ ಮಂದಗತಿಯ ಬೈಕ್ ಚಲಾಯಿಸುವ ಸ್ಪರ್ಧೆಗೆ ಮೇಯರ್ ಶೋಭಾ ಪಲ್ಲಾಗಟ್ಟೆ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಶೋಭಾ ಪಲ್ಲಾಗಟ್ಟೆ, ಯಾವುದೇ ಕೆಲಸವನ್ನೂ ಅಚ್ಚುಕಟ್ಟಾಗಿ ಮಾಡುವ ಗುಣವನ್ನು ಮಹಿಳೆಯರು ಹೊಂದಿದ್ದಾರೆ. ಭೂಮಿ ತಾಯಿ, ಭಾರತಾಂಬೆ ಸಹ ಹೆಣ್ಣು. ಹೆಣ್ಣುಮಕ್ಕಳು ಮನಸ್ಸು ಮಾಡಿದರೆ ಏನನ್ನಾದರೂ ಸಾಧಿಸಬಲ್ಲರು ಎಂಬುದಕ್ಕೆ ಭೂಮಿ ತಾಯಿಯೇ ಸಾಕ್ಷಿ ಎಂದರು.
ಮಧ್ಯರಾತ್ರಿಯಲ್ಲಿ ಮಹಿಳೆಯರು ನಿರ್ಭಯವಾಗಿ ಓಡಾಡಿದಾಗ ದೇಶಕ್ಕೆ ನಿಜವಾದ ಸ್ವಾತಂತ್ರ್ಯ ಬಂದಂತೆ ಎಂಬ ಕನಸನ್ನು ಮಹಾತ್ಮ ಗಾಂಧೀಜಿ ಕಂಡಿದ್ದರು. ಆದರೆ, ಪ್ರಸ್ತುತ ಹಾಡಹಾಗಲೇ ಮಹಿಳೆಯರ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಸ್ಪರ್ಧೆಯಲ್ ಕಲಾ ಕುಂಚ ಮಹಿಳಾ ವಿಭಾಗದ ಅಧ್ಯಕ್ಷೆ ಹೇಮಾ ಶಾಂತಪ್ಪ ಪೂಜಾರಿ, ನಿಕಟ ಪೂರ್ವ ಅಧ್ಯಕ್ಷೆ ಪರ್ವಿನ್ ಅಮೀರ್ ಜಾನ್, ಉಪಾಧ್ಯಕ್ಷೆ ಶೈಲಾ ವಿಜಯ್ಕುಮಾರ್, ಗೌರವಾಧ್ಯಕ್ಷೆ ವಸಂತಿ ಮಂಜುನಾಥ್, ಸಂಸ್ಥಾಪಕಿ ಜ್ಯೋತಿ ಗಣೇಶ್ ಶೆಣೈ ಮತ್ತಿತರರು ಭಾಗವಹಿಸಿದ್ದರು.ಈ ವೇಳೆ ಕಲಾಕುಂಚ ಅಧ್ಯಕ್ಷ ಕೆ.ಹೆಚ್. ಮಂಜುನಾಥ್, ಯಕ್ಷರಂಗದ ಗೌರವಾಧ್ಯಕ್ಷ ಬಿ. ಶಾಂತಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿ ಬೇಳೂರು ಸಂತೋಷ್ ಕುಮಾರ್ ಶೆಟ್ಟಿ, ಕಚೇರಿ ಕಾರ್ಯದರ್ಶಿ ವಿಜಯಕುಮಾರ್ ಶೆಟ್ಟಿ ಮತ್ತಿತರರು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
