ಆಹಾರ ಪದಾರ್ಥ ಕನ್ನ ಕಡಿವಾಣಕ್ಕೆ ಸ್ನೇಹ ಆ್ಯಪ್

ದಾವಣಗೆರೆ :

     ಕೆಲವು ಅಂಗನವಾಡಿ ಕೇಂದ್ರಗಳಲ್ಲಿ ಹಾಜರಾತಿಯಿಲ್ಲದ ಮಕ್ಕಳು, ಗರ್ಭಿಣಿಯರ ಆಹಾರ ಪದಾರ್ಥಗಳನ್ನು ಅಕ್ರಮವಾಗಿ ಬಳಸುತ್ತಿರುವುದಕ್ಕೆ ಕಡಿವಾಣ ಹಾಕಲು ಸ್ನೇಹ ಆ್ಯಪ್ ಸಹಕಾರಿಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ.ಎಚ್.ವಿಜಯ ಕುಮಾರ್ ತಿಳಿಸಿದರು.

    ಇಲ್ಲಿನ ತಾಲ್ಲೂಕು ಪಂಚಾಯಿಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಶುಕ್ರವಾರ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿಶು ಅಭಿವೃದ್ದಿ ಯೋಜನಾ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಲಾಗಿದ್ದ ಮಾತೃವಂದನಾ ಸಪ್ತಾಹ ಹಾಗೂ ಪೋಷಣ್ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

    ಅಂಗನವಾಡಿ ಕೇಂದ್ರಗಳಲ್ಲಿನ ಮಕ್ಕಳ ದಾಖಲಾತಿಗಳನ್ನು ನಿಖರವಾಗಿ ತಿಳಿಯಲು ಮುಂದಿನ ದಿನಗಳಲ್ಲಿ ಸ್ನೇಹ ಆ್ಯಪ್‍ನ್ನು ಪರಿಚಯಿಸಲಾಗುತ್ತಿದೆ. ಇದರ ಮೂಲಕ ಎಲ್ಲ ದಾಖಲಾತಿ ನಮೂದಿಸಲಾಗುತ್ತಿದ್ದು, ಅನಾವಶ್ಯಕವಾಗಿ ಪೋಲಾಗುವ, ಅಕ್ರಮವಾಗಿ ಬಳಸಿಕೊಳ್ಳುವ ಆಹಾರ ಪದಾರ್ಥಕ್ಕೂ ಕಡಿವಾಣ ಬೀಳಲಿದೆ ಎಂದು ಹೇಳಿದರು.

    ಸ್ನೇಹ ಆ್ಯಪ್‍ನ ಮೂಲಕ ಇಲಾಖೆಗೆ ಅಂಗನವಾಡಿ ಕಾರ್ಯಕರ್ತೆಯರು ಪ್ರತಿದಿನ ಹಾಜರಿದ್ದ ಮಕ್ಕಳ ಮತ್ತು ಮಾತೃವಂದನದಲ್ಲಿ ಹಾಜರಿದ್ದ ಗರ್ಭಿಣಿಯರ ಭಾವಚಿತ್ರವನ್ನು ಅಪೋಲೋಡ್ ಮಾಡಬೇಕಾಗುತ್ತದೆ. ಹೀಗಾಗಿ ಇನ್ನೂ ಮುಂದೆ ಆಹಾರ ಪದಾರ್ಥಗಳು ದುರುಪಯೋಗ ವಾಗುವುದಿಲ್ಲ ಎಂದರು.

    ಗರ್ಭಿಣಿಯರ ರಕ್ತದಲ್ಲಿನ ಹಿಮೊಗ್ಲೋಬಿನ್ ಪ್ರಮಾಣ ಶೇ. 11.5 ಇರಬೇಕು. ಆದರೆ ಪ್ರಸ್ತುತ ಗರ್ಭಿಣಿಯರಲ್ಲಿ ಶೇ. 6 ರಿಂದ 8 ಪ್ರಮಾಣದಲ್ಲಿ ಹಿಮೋಗ್ಲೋಬಿನ್ ಅಂಶ ಕಂಡುಬರುತ್ತಿದ್ದು, ಇದರಿಂದಾಗಿ ಹುಟ್ಟುವ ಮಕ್ಕಳಲ್ಲಿ ಅಪೌಷ್ಠಿಕತೆ ಕಂಡುಬರುತ್ತಿದೆ. ಗರ್ಭಿಣಿಯರು ಸರಿಯಾದ ಸಮಯಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಆರೋಗ್ಯದ ಬಗ್ಗೆ ಅರಿವು ಮೂಡಿಸಲು ಮಾತೃವಂದನಾ ಮತ್ತು ಮಾತೃಪೂರ್ಣ ಯೋಜನೆಯು ಸಹಕಾರಿಯಾಗಿದ್ದು ಈ ಯೋಜನೆಯಡಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಎರಡು ಯೋಜನೆಗಳಿಂದ 11,000 ರೂ. ಸಹಾಯಧನವನ್ನು ಗರ್ಭಿಣಿಯರು ಪಡೆಯಬಹುದಾಗಿದೆ. ಇದರ ಮೂಲಕ ತಾಯಂದಿರ ಆರೋಗ್ಯ ಸುಧಾರಣೆಗೆ ಹೆಚ್ಚಿನ ಮನ್ನಣೆ ನೀಡಲಾಗುತ್ತಿದೆ ಎಂದರು

    ತಾ.ಪಂ ಕಾರ್ಯನಿರ್ವಹಣಾಧಿಕಾರಿ ದಾರುಕೇಶ್ ಬಿ.ಎಂ ಮಾತನಾಡಿ, ಪ್ರಪಂಚದ ಎಲ್ಲಾ ರಾಷ್ಟ್ರಗಳಿಗೂ ಸಂಸ್ಕøತಿ ಮತ್ತು ಸಂಪ್ರದಾಯವನ್ನು ಪರಿಚಯಿಸಿದ ದೇಶ ಭಾರತ. ಭಾರತದ ಭವ್ಯ ಪರಂಪರೆಯಲ್ಲಿ ಸೀಮಂತ ಕಾರ್ಯಕ್ರಮವೂ ಉತ್ಕøಷ್ಟ ಮತ್ತು ಭವ್ಯ ಪರಂಪರೆಯನ್ನು ಹೊಂದಿದ್ದು, ಹೆಚ್ಚು ಮಹತ್ವದ್ದಾಗಿದೆ ಎಂದರು.

     ಅಧ್ಯಕ್ಷತೆ ವಹಿಸಿದ್ದ ತಾ.ಪಂ ಅಧ್ಯಕ್ಷೆ ಮಮತಾ ಮಲ್ಲೇಶಪ್ಪ ಮಾತನಾಡಿ, ಸೀಮಂತ ಎನ್ನುವುದು ಪ್ರತಿ ಮಹಿಳೆಗೂ ಸಂತೋಷದ ಕ್ಷಣವಾಗಿದೆ. ಸರ್ಕಾರದ ವತಿಯಿಂದ ಇಂತಹ ಕಾರ್ಯಕ್ರಮ ಮಾಡುತ್ತಿರುವುದು ಸಂತಸದ ಸಂಗತಿಯಾಗಿದೆ. ಗ್ರಾಮೀಣ ಭಾಗವೂ ಸೇರಿದಂತೆ ಸಮಾಜದ ಪ್ರತಿ ವರ್ಗದವರಿಗೂ ಈ ಯೋಜನೆ ತಲುಪಬೇಕು ಎಂದು ಹೇಳಿದರು.ಇದೇ ಸಮಯದಲ್ಲಿ ತಾ.ಪಂ ಅಧ್ಯಕ್ಷರು ಮತ್ತು ಸದಸ್ಯರುಗಳು ಗರ್ಭಿಣಿಯರಿಗೆ ಉಡಿ ತುಂಬುವ ಮೂಲಕ ಸಾಂಕೇತಿಕವಾಗಿ ಸೀಮಂತ ಕಾರ್ಯಕ್ರಮ ನಡೆಸಿಕೊಟ್ಟರು.

      ಕಾರ್ಯಕ್ರಮದಲ್ಲಿ ತಾ.ಪಂ. ಉಪಾಧ್ಯಕ್ಷ ಎ.ಬಿ.ಹನುಮಂತಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಉಮೇಶ್ ನಾಯ್ಕ, ತಾ.ಪಂ.ಸ್ಥಾಯಿ ಸಮಿತಿಯ, ನಿಕಟಪೂರ್ವ ಸ್ಥಾಯಿ ಸಮಿತಿ ಅಧ್ಯಕ್ಷ ಜಿ.ಎನ್ ನಾಗರಾಜ ಸೇರಿದಂತೆ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು. ಮೈತ್ರದೇವಿ ಕಾರ್ಯಕ್ರಮ ನಿರೂಪಿಸಿದರು. ಧರಣಿಕುಮಾರ್ ಸ್ವಾಗತಿಸಿದರು. ಲೆಕ್ಕಾಧಿಕಾರಿ ಏಳುಕೋಟಿ ವಂದಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link