ಹಾವೇರಿ
ಪಂಚಾಯತ್ ರಾಜ್ ವ್ಯವಸ್ಥೆಯನ್ನು ಬಲಪಡಿಸುವುದು ಗ್ರಾಮೀಣ ಪ್ರದೇಶದಲ್ಲಿ ವಾಸವಿರುವ ಅರ್ಹ ಪ್ರತಿ ಕುಟುಂಬವು ಉದ್ಯೋಗ ಚೀಟಿ ಹೊಂದುವ ಹಕ್ಕು ಹೊಂದಿರುತ್ತಾರೆ. ಉದ್ಯೋಗ ಚೀಟಿಯಲ್ಲಿ ಹೆಸರಿರುವ ಕುಟುಂಬದ ಎಲ್ಲಾ ವಯಸ್ಕರು, ಅಕುಶಲ ದೈಹಿಕ ಕೆಲಸಕ್ಕಾಗಿ ಅರ್ಜಿ ಸಲ್ಲಿಸಲು ಹಕ್ಕುಳ್ಳವರಾಗಿರುತ್ತಾರೆ ಎಂದು ತಾಲ್ಲೂಕ ಯೋಜನಾಧಿಕಾರಿಗಳಾದ ಕುಮಾರ ಮಣ್ಣವಡ್ಡರ ತಿಳಿಸಿದರು.
ತಾಲೂಕಿನ ಕಳ್ಳಿಹಾಳ ಗ್ರಾಮ ಪಂಚಾಯತಿಯ ಕಳ್ಳಿಹಾಳ ಗ್ರಾಮದಲ್ಲಿ 2018-19 ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ರೋಜಗಾರ ಹಾಗೂ ಸಾಮಾಜಿಕ ಪರಿಶೋಧನೆ ಗ್ರಾಮ ಸಭೆಯಲ್ಲಿ ಅವರು ಮಾತನಾಡಿದರು.
ಸಾಮಾಜಿಕ ಪರಿಶೋಧನೆಯಲ್ಲಿ ಅನುಷ್ಟಾನಗೊಂಡ ಕಾಮಗಾರಿಗಳನ್ನು ಮಂಡಿಸಿ ನಂತರ ಯೋಜನೆಯಡಿ ಇರುವ ವೈಯಕ್ತಿಕ ಕಾಮಗರಿಗಳ ಬಗ್ಗೆ ಗ್ರಾಮ ಸಭೆಯಲ್ಲಿ ತಿಳಿಸಲಾಯಿತು. ಪ್ರತಿ ಕುಟುಂಬಕ್ಕೆ ಒಂದು ಆರ್ಥಿಕ ವರ್ಷದಲ್ಲಿ ಕನಿಷ್ಠ 100 ದಿನಗಳ ಉದ್ಯೋಗವನ್ನು ಒದಗಿಸಿ ಅವರ ಜೀವನಕ್ಕೆ ಭದ್ರತೆ ಒದಗಿಸುವುದು. ದೀರ್ಘಕಾಲ ಬಾಳಿಕೆ ಬರುವ ಆಸ್ತಿಗಳನ್ನು ಸೃಜಿಸುವುದು. ಗ್ರಾಮೀಣ ಬಡವರ ಜೀವನೋಪಾಯದ ಮಟ್ಟವನ್ನು ಸುಧಾರಿಸುವುದು.
ಒಂದು ಆರ್ಥಿಕ ವರ್ಷದಲ್ಲಿ ಒಂದು ಕುಟುಂಬ 100 ಮಾನವ ದಿನಗಳ ಕೆಲಸಕ್ಕಾಗಿ ಅರ್ಜಿ ಸಲ್ಲಿಸಲು ಹಕ್ಕುಳ್ಳವರಾಗಿರುತ್ತಾರೆ. ಮಹಿಳೆಯರಿಗೆ ಮತ್ತು ಪುರುಷರಿಗೆ ಸಮಾನ ಕೂಲಿ ದಿನವೊಂದಕ್ಕೆ ರೂ.249/- ಕೆಲಸಕ್ಕೆ ಬೇಡಿಕೆ ಸಲ್ಲಿಸಿದ ಹದಿನೈದು ದಿನದೊಳಗೆ ಉದ್ಯೋಗ ನೀಡದಿದ್ದಲ್ಲಿ ನಿರುದ್ಯೋಗ ಭತ್ಯೆಗೆ ಅವಕಾಶವಿರುತ್ತದೆ. ವಾರಾಂತ್ಯದಲ್ಲಿ ಕೂಲಿಯನ್ನು ಪಾವತಿಸಬೇಕು.
ಅನಿವಾರ್ಯ ಸಂಧರ್ಭದಲ್ಲಿ ಗರಿಷ್ಟ 15 ದಿನಗಳಿಗೆ ಮೀರದಂತೆ ಕೂಲಿ ಪಾವತಿಸುವುದು ಕಡ್ಡಾಯ. ತಪ್ಪಿದ್ದಲ್ಲಿ ಕೂಲಿ ವಿಳಂಬ ಪರಿಹಾರ ಭತ್ಯೆ ಪಡೆಯಲು ಅವಕಾಶವಿರುತ್ತದೆ. ನಮೂನೆ -6 ರಲ್ಲಿ ಕೆಲಸಕ್ಕಾಗಿ ಬೇಡಿಕೆ ಸಲ್ಲಿಸಿದ ನಂತರ ಸೂಚಿಸಿದ ಸ್ಥಳದಲ್ಲಿ ಮತ್ತು ಸಮಯದಲ್ಲಿ ಹಾಜರಾಗಿ ನಿಗಧಿಪಡಿಸಿದ ಕೆಲಸವನ್ನು ನಿರ್ವಹಿಸುವುದು. ಕೂಲಿ ಹಣ ನೇರವಾಗಿ ನಿಮ್ಮ ಖಾತೆಗೆ ಇ.ಎಫ್.ಎಂಎಸ್ ಮೂಲಕ ವರ್ಗಾಯಿಸಲಾಗುವುದು.
ವಿಕಲಚೇತನರಿಗೆ ಮತ್ತು 65 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರಿಗೆ ಕೆಲಸದ ಪ್ರಮಾಣದಲ್ಲಿ ಶೇಕಡಾ 50% ರಿಯಾಯಿತಿ ನೀಡಲಾಗುತ್ತದೆ ಹಾಗೆಯೇ ಮುಂದುವರೆದು ವೈಯಕ್ತಿಕ ಕಾಮಗಾರಿಗಳು ಮತ್ತು ಸಮುದಾಯ ಕಾಮಗಾರಿಗಳನ್ನು ಮಾಡಿಕೊಳ್ಳುವಂತೆ ತಾಲ್ಲೂಕ ಯೋಜನಾಧಿಕಾರಿಗಳು ವಿವರಿಸಿದರು.
ತಾಲೂಕಿನ ಮಾಹಿತಿ ಶಿಕ್ಷಣ ಸಂವಹನ ಅಧಿಕಾರಿ ಗಿರೀಶ ಜಿ ಬಿ, ತಾಲೂಕ ಸಾಮಾಜಿಕ ಪರಿಶೊಧಕರಾದ ಸಂಪತ್ತಕುಮಾರ, ತಾಲ್ಲೂಕ ಇಂಜಿನಿಯರ್ ನಂದಿನಿ, ಉದ್ಯೋಗ ಚೀಟಿ ಪಡೆದ ಕೂಲಿ ಕಾರ್ಮಿಕರು, ಜನಪ್ರತಿನಿಧಿಗಳು, ವಿವಿಧ ಇಲಾಖೆಯವರು, ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು,ಗ್ರಾಮ ಪಂಚಾಯತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಗ್ರಾಮ ಪಂಚಾಯತಿಯ ಅಭಿವೃಧ್ಧಿ ಅಧಿಕಾರಿ ಶ್ರಿಮತಿ ಶೋಭಾ, ಗ್ರಾಪಂ ಸಿಬ್ಬಂದಿ ವರ್ಗ, ಸರ್ವಜನಿಕರು ಪಾಲ್ಗೊಂಡಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ