ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಮೌಲ್ಯಗಳ ಕುಸಿಯುತ್ತಿವೆ : ಎನ್ ಸಂತೋಷ್ ಹೆಗಡೆ

ಬೆಂಗಳೂರು

    ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಮೌಲ್ಯಗಳ ಕುಸಿಯುತ್ತಿರುವುದು ದುರ್ದೈವ ಸಂಗತಿ, ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗಡೆ ಹೇಳಿದ್ದಾರೆ.ಇಂದಿನ ಯುವ ಸಮೂಹ ಪ್ರಾಮಾಣಿಕತೆ ಹಾಗೂ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಂಡು ದೇಶದ ಪ್ರಜಾಪ್ರಭುತ್ವ ತತ್ವಗಳನ್ನು ಎತ್ತಿ ಹಿಡಿಯಬೇಕು ಎಂದು ಕರೆ ನೀಡಿದ್ದಾರೆ.

     ಬೆಂಗಳೂರು ವಿಶ್ವವಿದ್ಯಾಲಯ ಕಾನೂನು ಕಾಲೇಜಿನಿಂದ ಆಯೋಜಿಸಿದ್ದ ಆನ್‍ಲೈನ್ ಉಪನ್ಯಾಸದಲ್ಲಿ ಪಾಲ್ಗೊಂಡ ಅವರು, ಸರ್ಕಾರಿ ಉದ್ಯೋಗಿಗಳು ಕೇವಲ ಸಂಬಳಕ್ಕೆ ಸೀಮಿತವಾಗಿ ಕೆಲಸ ಮಾಡದೆ, ಸೇವಾ ಮನೋಭಾವನೆಯನ್ನು ಮೈಗೂಡಿಸಿಕೊಳ್ಳಬೇಕು ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಚ್.ಕೆ. ಪಾಟೀಲ್, ಸರ್ವೋಚ್ಚ ನ್ಯಾಯಾಲಯದ ವಕೀಲ ಮೋಹನ್ ಕಾತರಕಿ, ಕಾನೂನು ಅಧ್ಯಯನ ವಿಭಾಗದ ಅಧ್ಯಕ್ಷ  ದಶರಥ ಮತ್ತಿತರರು ಭಾಗವಹಿಸಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link