ಬೆಂಗಳೂರು
ಮನೆಗೆ ಹೋಗಲು ರಸ್ತೆ ದಾಟುತ್ತಿದ್ದ ಮಧ್ಯಪ್ರದೇಶ ಮೂಲದ ಸಾಫ್ಟ್ವೇರ್ ಇಂಜಿನಿಯರ್ರೊಬ್ಬರು ಅಪರಿಚಿತ ವಾಹನ ಹರಿದು ಮೃತಪಟ್ಟಿರುವ ಧಾರುಣ ಘಟನೆ ಮಡಿವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ ನಡೆದಿದೆ .ಬಾಗ್ಮನೆ ಟೆಕ್ ಪಾರ್ಕ್ನ ಸಾಫ್ಟ್ವೇರ್ ಕಂಪನಿಯೊಂದರಲ್ಲಿ ಇಂಜಿನಿಯರ್ ಆಗಿದ್ದ ಶಿವಂ ಬಾದಲ್ (25)ಎಂದು ಮೃತರನ್ನು ಗುರುತಿಸಲಾಗಿದೆ.
ರೂಪೇನ ಅಗ್ರಹಾರದ ಪಿಜಿ ಹಾಸ್ಟೆಲ್ ಮಾಡಿಕೊಂಡು ವಾಸಿಸುತ್ತಿದ್ದರು. ಕೆಲಸ ಮುಗಿಸಿಕೊಂಡು ಮನೆಗೆ ಬಂದಿದ್ದ ಅವರು, ರಾತ್ರಿ 9.30ರ ವೇಳೆ ಬೊಮ್ಮನಹಳ್ಳಿಯಿಂದ ಸಿಲ್ಕ್ ಬೋರ್ಡ್ ಕಡೆಗೆ ಹೋಗುವ ರಸ್ತೆಯನ್ನು ರೂಪೇನಅಗ್ರಹಾರದ ಬಳಿ ದಾಟುತ್ತಿದ್ದರು.
ಈ ವೇಳೆ ವೇಗವಾಗಿ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದು ಶಿವಂ ಬಾದಲ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಮಡಿವಾಳ ಸಂಚಾರ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








