ಕುಡಿಯುವ ನೀರಿನ ಸಮಸ್ಯೆಗೆ ತ್ವರಿತವಾಗಿ ಸ್ಪಂದಿಸಲು ಜಿಲ್ಲಾಧಿಕಾರಿ ಸೂಚನೆ

ಹಾವೇರಿ

     ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಕುಡಿಯುವ ನೀರಿನ ವಾಸ್ತವ ಸಮಸ್ಯೆಯನ್ನು ಪರಿಶೀಲಿಸಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿದರು.

     ಶುಕ್ರವಾರ ಹಾವೇರಿ ತಾಲೂಕಿನ ಕೋಳೂರ, ಕರ್ಜಗಿ, ಸವಣೂರ ತಾಲೂಕಿನ ಹಿರೇಮುಗದೂರು, ಕೆ.ಬಿ.ತಿಮ್ಮಾಪೂರ, ಕಡಕೋಳ, ಶಿರಬಡಗಿ ಹಾಗೂ ಸವಣೂರ ನಗರಕ್ಕೆ ಭೇಟಿ ನೀಡಿ ಕುಡಿಯುವ ನೀರಿನ ಪೂರೈಕೆ ಕುರಿತಂತೆ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿ ಪ್ರತಿ ದಿವಸ ಹಳ್ಳಿಗಳಿಗೆ ಭೇಟಿ ನೀಡಿ ಕುಡಿಯುವ ನೀರಿನ ಸಮಸ್ಯೆ ಕುರಿತಂತೆ ಮಾಹಿತಿ ಪಡೆದು ತ್ವರಿತವಾಗಿ ಸ್ಪಂದಿಸಬೇಕು. ನನಗೆ ಖುದ್ದಾಗಿ ಮಾಹಿತಿ ಒದಗಿಸುವಂತೆ ನಿರ್ದೇಶನ ನೀಡಿದರು.

     ಈ ಸಂದರ್ಭದಲ್ಲಿ ಉದ್ಯೋಗ ಖಾತ್ರಿಯಡಿ ಕೈಗೊಂಡಿರುವ ಕಡಕೋಳ ಗ್ರಾಮದ ಕೆರೆ ಹೂಳೆತ್ತುವ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು. ಇದೇ ಮಾದರಿಯಲ್ಲಿ ಮಳೆಗಾಲದಲ್ಲಿ ನೀರು ಸಂಗ್ರಹಿಸಲು ಅನುಕೂಲವಾಗುವಂತೆ ಕರೆಗೆಳ ಪುನಶ್ಚೇತನ, ಕೆರೆಗಳಿಗೆ ನೀರು ಹರಿದುಬರುವ ಕಾಲುವೆಗಳ ಪುನಶ್ಚೇತನ ಕಾಮಗಾರಿಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಕೈಗೊಳ್ಳುವಂತೆ ಸ್ಥಳೀಯ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಹಾಗೂ ತಾಲೂಕು ಪಂಚಾಯತಿ ಕಾರ್ಯನಿರ್ವಾಹಣಾಧಿಕಾರಿಗಳಿಗೆ ಸೂಚನೆ ನೀಡಿದರು.

      ಸವಣೂರ ಮತ್ತು ಶಿರಬಡಗಿ, ಕೆ.ಬಿ.ತಿಮ್ಮಾಪೂರ ಗ್ರಾಮಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಸ್ಥಳೀಯ ಗ್ರಾಮಸ್ಥರೊಂದಿಗೆ ಕುಡಿಯುವ ನೀರಿನ ಸಮಸ್ಯೆ ಹಾಗೂ ಪೂರೈಕೆ ಕುರಿತಂತೆ ಮಾಹಿತಿ ಪಡೆದುಕೊಂಡರು. ಇದೇ ಸಂದರ್ಭದಲ್ಲಿ ಗ್ರಾಮಸ್ಥರ ಅಹವಾಲುಗಳನ್ನು ಆಲಿಸಿದ ಕೃಷ್ಣ ಬಾಜಪೇಯಿ ಅವರು ಯಾವುದೇ ಸಂದರ್ಭದಲ್ಲಿ ಜನರು ಕುಡಿಯುವ ನೀರಿನ ಬೇಡಿಕೆ ಸಲ್ಲಿಸಿದ ತಕ್ಷಣ ತ್ವರಿತವಾಗಿ ಸ್ಪಂದಿಸಿ ಕುಡಿಯುವ ನೀರನ್ನು ಪೂರೈಸಬೇಕು. ಎತ್ತರ ಪ್ರದೇಶದಲ್ಲಿರುವ ಗ್ರಾಮಗಳಿಗೆ ನಳದ ನೀರು ಸರಬರಾಜಿನಲ್ಲಿ ವ್ಯತ್ಯಯವಾದರೆ ಪಯಾರ್ಯ ಮಾರ್ಗದಲ್ಲಿ ಕುಡಿಯುವ ನೀರನ್ನು ಪೂರೈಸಲು ಆದ್ಯ ಗಮನ ಹರಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

     ಸವಣೂರ ಪಟ್ಟಣದ ವಿವಿಧ ವಾರ್ಡ್‍ಗಳಿಗೆ ಭೇಟಿ ನೀಡಿ ಕುಡಿಯುವ ನೀರಿನ ಪೂರೈಕೆ ಕುರಿತಂತೆ ವಿವರವಾಗಿ ಪರಿಶೀಲಿಸಿದರು. ಸ್ಥಳೀಯ ನಾಗರಿಕರಿಂದ ಮಾಹಿತಿಯನ್ನು ಪಡೆದುಕೊಂಡರು. ಉಪ ವಿಭಾಗಾಧಿಕಾರಿ ಹರ್ಷಲ್ ನಾರಾಯಣ, ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ವಾಸಣ್ಣ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಅಭಿಯಂತರ ವಿನಾಯಕ ಹುಲ್ಲೂರ, ಹಾವೇರಿ ತಾಲೂಕು ಪಂಚಾಯತಿ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಅನ್ನಪೂರ್ನ ಮುದಕಮ್ಮನವರ ಹಾಗೂ ವಿವಿಧ ಅಧಿಕಾರಿಗಳು , ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link