ಹೊಸದಿಲ್ಲಿ:
ಕೇಂದ್ರದ ಅಧಿಕೃತ ವಿರೋಧ ಪಕ್ಷವಾದ ಯುಪಿಎ ಅಧ್ಯಕ್ಷರಾದ ಶ್ರೀಮತಿ ಸೋನಿಯಾ ಗಾಂಧಿಯವರನ್ನು ಕಾಂಗ್ರೆಸ್ ಪಕ್ಷದ ಸಂಸದೀಯ ಪಕ್ಷದ ನಾಯಕರನ್ನಾಗಿ ಮತ್ತೊಮ್ಮೆ ಆಯ್ಕೆ ಮಾಡಲಾಗಿದೆ.
ಸಂಸತ್ ಭವನದ ಸೆಂಟ್ರಲ್ ಹಾಲ್ ನಲ್ಲಿ ಇಂದು ನಡೆದ ಕಾಂಗ್ರೆಸ್ ಪಕ್ಷದ ಸಂಸದರ ಸಭೆಯಲ್ಲಿ ಸೋನಿಯಾ ಅವರನ್ನು ಆಯ್ಕೆ ಮಾಡಲಾಗಿದೆ. ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನೊಳಗೊಂಡಂತೆ 52 ಮಂದಿ ಕಾಂಗ್ರೆಸ್ ಸಂಸದರು, ರಾಜ್ಯಸಭಾ ಸದಸ್ಯರು ಭಾಗಿಯಾಗಿದ್ದರು.
ಸೋನಿಯಾ ಗಾಂಧಿ ಅವರು ರಾಯ್ ಬರೇಲಿ ಕ್ಷೇತ್ರದಿಂದ 1.67 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.ಸಂಸತ್ ಕಲಾಪದಲ್ಲಿ ಆಡಳಿತ ಪಕ್ಷದ ವಿರುದ್ಧ ಯಾವ ವಿಚಾರಗಳನ್ನು ಎತ್ತಬೇಕು ಎನ್ನುವ ಕುರಿತೂ ಚರ್ಚೆ ನಡೆಸಲಾಗಿದೆ. ಪ್ರಮುಖವಾಗಿ ಆರ್ಥಿಕ ಕುಂಠಿತ, ನಿರುದ್ಯೋಗಮತ್ತು ಇತರಕೆಲ ವಿಚಾರಗಳನ್ನು ಹೋರಾಟಕ್ಕೆ ಅಸ್ತ್ರವನ್ನಾಗಿಸಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.