ಶೀಘ್ರದಲ್ಲಿಯೇ ಹೊರ ರಾಜ್ಯಗಳಿಗೆ ಬಸ್ ಸಂಚಾರ ಸಂಬಂಧ ಕ್ರಮ : ಡಿಸಿಎಂ

ಬೆಂಗಳೂರು

    ದೇಶಾದ್ಯಂತ ಲಾಕ್‍ಡೌನ್ ಸಡಿಲಗೊಳಿಸಿರುವುದರಿಂದ ಹೊರ ರಾಜ್ಯಗಳಿಗೆ ಬಸ್ ಸಂಚಾರ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.ಇತರೆ ರಾಜ್ಯಗಳಿಗೆ ಅದರಲ್ಲೂ ಮುಖ್ಯವಾಗಿ ಗೋವಾ, ಕೇರಳ, ತಮಿಳುನಾಡು, ಪಾಂಡಿಚೇರಿ, ತೆಲಂಗಾಣ ರಾಜ್ಯಗಳಿಗೆ ಪುನ: ಬಸ್ ಸಂಚಾರ ಪ್ರಾರಂಭಿಸಲಾಗುವುದು. ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ವಾಯವ್ಯ ರಸ್ತೆ ಸಾರಿಗೆ ಸಂಸ್ಥೆ ಮತ್ತು ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆಗಳು ಬಸ್ ಸಂಚಾರಕ್ಕೆ ಸಜ್ಜಾಗಿವೆ. ಆದರೆ ಪಕ್ಕದ ಈ ಎಲ್ಲಾ ರಾಜ್ಯಗಳಿಂದ ಇದಕ್ಕೆ ಹಸಿರು ನಿಶಾನೆ ದೊರೆಯಬೇಕಿದೆ. ನಂತರ ಸಾರ್ವಜನಿಕರ ಹಿತದೃಷ್ಟಿಯಿಂದ ಬಸ್ ಸಂಚಾರ ಪ್ರಾರಂಭಿಸಲಾಗುವುದು ಎಂದು ಹೇಳಿದ್ದಾರೆ.

     ಪರಿಸ್ಥಿತಿ ಸುಧಾರಣೆಗೊಂಡ ನಂತರ ಮೊದಲ ಹಂತದಲ್ಲಿ ರಾಜ್ಯದಿಂದ ಆಂಧ್ರ ಪ್ರದೇಶಕ್ಕೆ ಸರ್ಕಾರಿ ಸಾರಿಗೆ ಬಸ್ ಸಂಚಾರ ಪ್ರಾರಂಭಿಸಲಾಗಿದೆ. ಸಾರ್ವಜನಿಕರ ಬೇಡಿಕೆಗಳನ್ನು ಗಮನದಲ್ಲಿಟ್ಟುಕೊಂಡು ಗೋವಾ, ಕೇರಳ, ತಮಿಳುನಾಡು, ಪಾಂಡಿಚೇರಿ, ತೆಲಂಗಾಣ ರಾಜ್ಯಗಳಿಗೆ ಬಸ್ ಸಂಚಾರ ಪ್ರಾರಂಭಿಸುವ ಸಾಧ್ಯಾಸಾಧ್ಯತೆಗಳನ್ನು ಪರಿಶೀಲಿಸುವಂತೆ ಕೋರಿ ನಮ್ಮ ಸಾರಿಗೆ ಇಲಾಖೆಯಿಂದ ಪತ್ರ ಬರೆಯಲಾಗಿದೆ ಎಂದಿದ್ದಾರೆ.

    ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಲಕ್ಷ್ಮಣ ಸವದಿ, ನೆರೆ ರಾಜ್ಯಗಳಿಗೆ ಸಾರಿಗೆ ಸೇವೆ ಆರಂಭಿಸುವ ಕುರಿತು ಆಯಾ ಸಾರಿಗೆ ಸಂಸ್ಥೆಗಳಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಈ ಎಲ್ಲಾ ರಾಜ್ಯಗಳಿಂದ ಶೀಘ್ರವೇ ಇದಕ್ಕೆ ಸಕಾರಾತ್ಮಕ ಸ್ಪಂದನೆ ದೊರೆಯಬಹುದು ಎಂಬ ನಿರೀಕ್ಷೆಯೂ ಇದೆ. ಹೀಗೆ ಆಯಾ ರಾಜ್ಯಗಳಿಂದ ವ್ಯಕ್ತವಾಗುವ ಪ್ರತಿಕ್ರಿಯೆಗಳನ್ನು ಆಧರಿಸಿ ಪುನ: ಬಸ್ ಸಂಚಾರ ಪ್ರಾರಂಭಿಸಿ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದ್ದಾರೆ.

    ಲಾಕ್‍ಡೌನ್‍ಗಿಂತ ಮುಂಚೆ ನಮ್ಮ ರಾಜ್ಯದಿಂದ ಒಟ್ಟು 2500 ಸರ್ಕಾರಿ ಬಸ್‍ಗಳು ನೆರೆಯ ರಾಜ್ಯಗಳಿಗೆ ಸಂಚರಿಸುತ್ತಿತ್ತು. ಇದೀಗ ಮತ್ತೆ ಮುಂಚಿನಂತೆ ಮತ್ತೆ ಸಾರಿಗೆ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap