ಶೀಘ್ರದಲ್ಲಯೇ ಬೃಹತ್ ಕಟ್ಟಡ ನಿರ್ಮಾಣ ಚಟುವಟಿಕೆ ಆರಂಭ: ಸುರೇಶ್ ಕುಮಾರ್

ಬೆಂಗಳೂರು

     ನಗರದಲ್ಲಿ ಶೀಘ್ರವಾಗಿ ಕಟ್ಟಡ ನಿರ್ಮಾಣ ಸೇರಿದಂತೆ ಎಲ್ಲಾ ಬೃಹತ್ ನಿರ್ಮಾಣ ಚಟುವಟಿಕೆಗಳು ಆರಂಭವಾಗಲಿದ್ದು ಕಾರ್ಮಿಕರು ಇಲ್ಲಿಯೇ ಉಳಿದು ಕೊಂಡು ಯಾವುದೇ ಆತಂಕಕ್ಕೊಳಗಾಗದೇ ತಮ್ಮ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕೆಂದು ಕಾರ್ಮಿಕರಿಗೆ ಸಚಿವ ಸುರೇಶ್‍ಕುಮಾರ್ ಸಲಹೆ ನೀಡಿದರು.

    ಯಶವಂತಪುರದ ಎಪಿಎಂಸಿ ಹಾಗೂ ಮಾಗಡಿ ರಸ್ತೆಯ ಕಾವೇರಿಪುರ ಗುಡ್ಡದಲ್ಲಿ ಬಹುವಸತಿ ಸಮುಚ್ಛಯ ನಿರ್ಮಾಣದಲ್ಲಿ ತೊಡಗಿಸಿಕೊಂಡಿರುವ ಕಾರ್ಮಿಕರನ್ನು ಭೇಟಿ ಮಾಡಿ ಮಾತನಾಡಿ ಎಲ್ಲಾ ಕಾರ್ಮಿಕರಿಗೆ ನೀಡಬೇಕಿರುವ ಬಾಕಿಯನ್ನು ಕೂಡಲೇ ನೀಡಲು ಅಧಿಕಾರಿ ಗಳಿಗೆ ಸೂಚಿಸಿ ತಕ್ಷಣದಿಂದಲೇ ಅಭಿವೃದ್ದಿ ಕಾಮಗಾರಿಗಳು ಆರಂಭಿಸುವಂತೆ ಎಲ್ಲ ಪೂರ್ವಭಾವಿ ಕ್ರಮಗಳಿಗೆ ಆಗ್ರಹಿಸಿದರು

     ಸರ್ಕಾರವು ತಮ್ಮೆಲ್ಲರ ಹಿತ ಕಾಯಲು ಸದಾ ಬದ್ದವಾಗಿದೆ ಎಂದು ಹೇಳಿದರು.ಈ ವೇಳೇ ಕಾರ್ಮಿಕರಿಗೆ ಆಹಾರ ಧಾನ್ಯಗಳನ್ನು ವಿತರಿಸಿದ ಸಚಿವರು, ಬೆಂಗಳೂರು ನಗರದ ಹಲವಾರು ಸ್ಥಳಗಳಲ್ಲಿ ಹೀಗೆ ಹಲವು ದಿನಗಳಿಂದ ನೆಲೆಸಿರುವ, ಉತ್ತರಪ್ರದೇಶ, ಬಿಹಾರ, ಜಾರ್ಖಂಡ್ ಸೇರಿದಂತೆ ಹಲವು ರಾಜ್ಯಗಳ ಸಾವಿರಾರು ಕೂಲಿ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ಆತಂಕದಿಂದ ಸಿದ್ಧರಾಗುತ್ತಿದ್ದು, ಇವರುಗಳು ಇಲ್ಲಿಯೇ ನೆಲೆಸುವಂತೆ ಸರ್ಕಾರದ ಪರವಾಗಿ ತಾವು ಖುದ್ದಾಗಿ ತೆರಳಿ ಮನವಿ ಮಾಡಿದ್ದೇನೆ ಎಂದು ಹೇಳಿದರು.ಸಚಿವರೊಂದಿಗೆ ಹಿರಿಯ ಐ ಎ ಎಸ್ ಅಧಿಕಾರಿ ಕುಮಾರ್ ನಾಯಕ್, ಸೇರಿದಂತೆ ಸ್ಥಳೀಯ ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap