ಶೀಘ್ರದಲ್ಲಿಯೇ ಖಾಲಿ ಹುದ್ದೆ ಭರ್ತಿ: ಶಶಿಕಲಾ ಜೊಲ್ಲೆ

ಬೆಂಗಳೂರು

    ನೆನಗುದಿಗೆ ಬಿದ್ದಿರುವ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಖಾಲಿಯಿರುವ ಶೇ. ೫೦ಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಶಶಿಕಲಾ ಜೊಲ್ಲೆ ಅವರು ತಿಳಿಸಿದ್ದಾರೆ.

    ನಗರದ ಬಿಜೆಪಿ ಕೇಂದ್ರ ಕಛೇರಿಯಲ್ಲಿ ಗುರುವಾರ ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಉದ್ದೇಶಿಸಿದ ಅವರು ಮಾತನಾಡಿದ ಇಲಾಖೆಯಲ್ಲಿ ಹಲವಾರು ಹುದ್ದೆಗಳು ಸಿಬ್ಬಂದಿ ಖಾಲಿಯಿದ್ದು ಇದರಿಂದ ಇಲಾಖೆಗಳ ಕೆಲಸ ಕಾರ್ಯಗಳಿಗೆ ಕಷ್ಟವಾಗಿದೆ ಹಾಗಾಗಿ ನೇಮಕಾತಿಗೆ ಆದ್ಯತೆ ನೀಡಿ ಖಾಲಿಯಿರುವ ಶೇ.೫೦ರಷ್ಟು ಹುದ್ದೆಗಳನ್ನು ಅತಿ ಶೀರ್ಘರ ಭರ್ತಿ ಮಾಡಲಾಗುವುದು ಎಂದರು.

    ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯನ್ನು ದೇಶದಲ್ಲಿ ಮಾದರಿ ಇಲಾಖೆಯನ್ನಾಗಿ ಮಾಡುವಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸಲಿದ್ದೇನೆ ಇಲಾಖೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕಾರ್ಯಕರ್ತೆಯರು, ಹಿರಿಯ ನಾಗರಿಕರು ಮತ್ತು ದಿವ್ಯಾಂಗ ಮಕ್ಕಳ ಬಗ್ಗೆ ಈಗಾಗಲೇ ಹೆಚ್ಚು ಮಾಹಿತಿಯನ್ನು ಪಡೆದಿದ್ದೇನೆ. ಈ ಜನರ ಬದುಕನ್ನು ಹಸನು ಮಾಡಲು ಹಲವಾರು ಕಾರ್ಯಕ್ರಮಗಳನ್ನು ರೂಪಿಸುವುದಾಗಿ ಅವರು ತಿಳಿಸಿದರು.

    ನನ್ನ ಮಗನು ದಿವ್ಯಾಂಗನಾಗಿದ್ದಾನೆ. ಇಂತಹ ಮಕ್ಕಳನ್ನು ಹೆತ್ತವರ ಕಷ್ಟ ಏನು ಎನ್ನುವುದು ನನಗೂ ಗೊತ್ತು. ಈ ಮಕ್ಕಳ ಸಮಗ್ರ ಅಭಿವೃದ್ಧಿಗಾಗಿ ಕಾರ್ಯಕ್ರಮವನ್ನು ರೂಪಿಸಲಿದ್ದೇನೆ. ಹಿರಿಯ ನಾಗರೀಕರು ಮತ್ತು ಅಂಗನವಾಡಿ ಕಾರ್ಯಕರ್ತರಿಗೆ ಸಿಗುತ್ತಿರುವ ಸವಲತ್ತುಗಳು ಮತ್ತು ಅವರ ಸಮಸ್ಯೆಗಳ ಬಗ್ಗೆ ಸದ್ಯದಲ್ಲೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಚರ್ಚೆ ನಡೆಸಲಿದ್ದೇನೆ. ಇದಕ್ಕೂ ಮುನ್ನ ಬಿಜೆಪಿ ಮಹಿಳಾ ಮೋರ್ಚಾದ ಮಹಿಳಾ ಕಾರ್ಯಕರ್ತರ ಸಭೆ ಕರೆದು ಅವರಿಂದಲೂ ಸಲಹೆ ಸೂಚನೆಗಳನ್ನು ಪಡೆಯಲಿದ್ದೇನೆ ಎಂದು ಹೇಳಿದರು.

      ಪ್ರಾಸ್ತಾವಿಕ ಭಾಷಣ ಮಾಡಿದ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಭಾರತಿ ಶೆಟ್ಟಿ ಅವರು ಮಹಿಳಾ ಮೋರ್ಚಾ ಸಂಘಟನೆ ಹಾಗೂ ಸರ್ಕಾರದ ಕಾರ್ಯಕ್ರಮಗಳು ಜನತೆಗೆ ತಲುಪಿಸುವಲ್ಲಿ ಕೈಗೊಂಡಿರುವ ಚಟುವಟಿಕೆಗಳ ಬಗ್ಗೆ ಪ್ರತಿ ಮೂರು ತಿಂಗಳಿಗೊಮ್ಮೆ ಪಕ್ಷದ ವರಿಷ್ಟರಿಗೆ ವರದಿ ಸಲ್ಲಿಸಲಾಗುವುದು ತ್ರಿವಳಿ ತಲಾಖ್ ಬಗ್ಗೆ ಮಹಿಳೆಯರಲ್ಲಿ ಜಾಗೃತಿ ಉಂಟು ಮಾಡಲಾಗಿದೆ. ದೇಶದ ಸಂಸ್ಕಾರ ಆಚಾರ- ವಿಚಾರಗಳ ಬಗ್ಗೆ ಶಾಲಾ- ಕಾಲೇಜುಗಳಲ್ಲಿ ಪಕ್ಷದ ಕಾರ್ಯಕರ್ತೆಯರು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುತ್ತಿದ್ದಾರೆ ಎಂದು ಹೇಳಿದರು.

      ಇದುವರೆವಿಗೂ ಪಕ್ಷದ ಕಾರ್ಯಕರ್ತೆಯರು ಯಾವುದೇ ಅಧಿಕಾರಕ್ಕಾಗಿ ಹೋರಾಟ ನಡೆಸಿಲ್ಲ. ಅಧಿಕಾರ ಸಿಗಲಿಲ್ಲ ಎಂದು ಅಸಮಾಧಾನಗೊಂಡಿಲ್ಲ. ಆದರೂ ನಿಗಮ ಮಂಡಳಿಗಳಲ್ಲಿ ಹೆಚ್ಚು ಮಹಿಳೆಯರಿಗೆ ಪ್ರೋತ್ಸಾಹ ನೀಡಬೇಕು ಎಂದು ಪಕ್ಷದ ವರಿಷ್ಠರಲ್ಲಿ ಮನವಿ ಮಾಡಿದರು. ೧೫ ಕ್ಷೇತ್ರಗಳಲ್ಲಿ ನಡೆಯಲಿರುವ ಉಪ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಕಾರ್ಯಕರ್ತೆಯರು ಈಗಿನಿಂದಲೇ ಸಜ್ಜಾಗಬೇಕು ಎಂದು ಹೇಳಿದರು.ರಾಷ್ಟ್ರೀಯ ಮಹಿಳಾ ಮೋರ್ಜಾ ಅಧ್ಯಕ್ಷೆ ವಿಜಯ್ ರಾಹಟ್ಕ್‌ಕರ್ ಉದ್ಘಾಟನಾ ಭಾಷಣ ಮಾಡಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link