ಭಾರತ ಸಂಸ್ಕೃತಿ ಅಧ್ಯಯನ ಸಮಿತಿ : ದಕ್ಷಿಣ ಭಾರತೀಯರ ಕಡೆಗಣನೆ : ಎಚ್ ಡಿ ಕೆ

ಬೆಂಗಳೂರು:

   ಭಾರತದ 12 ಸಾವಿರ ವರ್ಷಗಳ ಇತಿಹಾಸ, ಸಂಸ್ಕೃತಿ ಮತ್ತು ಜಗತ್ತಿನ ಇತರ ಸಂಸ್ಕೃತಿಗಳೊಂದಿಗಿನ ಸಂಪರ್ಕದ ಬಗ್ಗೆ ಅಧ್ಯಯನ ನಡೆಸಲು ಕೇಂದ್ರ ಸರ್ಕಾರ 16 ಸದಸ್ಯರ ತಜ್ಞರ ಸಮಿತಿ ರಚಿಸಿದೆ.ಆದರೆ ಇದರಲ್ಲಿ ಕನ್ನಡಿಗರಾಗಲಿ, ದ್ರಾವಿಡ ಪರಂಪರೆಯ ಜ್ಞಾನವಿರುವ ದಕ್ಷಿಣ ಭಾರತೀಯರಾಗಲಿ, ಮಹಿಳೆಯರಾಗಲಿ ಇಲ್ಲವೇ ಇಲ್ಲವಾಗಿರುವುದು ದುರದೃಷ್ಟಕರ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾ ರಸ್ವಾಮಿ ಪ್ರಶ್ನಿಸಿದ್ದಾರೆ.

   ಈ ಸಂಬಂಧ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಅವರು, ಕನ್ನಡಿಗ ಪ್ರತಿನಿಧಿಗಳೇ ಇಲ್ಲದೇ ಕರ್ನಾಟಕದ ಚರಿತ್ರೆ, ಪರಂಪರೆಯ ನಿಷ್ಪಕ್ಷಪಾತ ಅಧ್ಯಯನ ಸಾದುವೆ? ದಕ್ಷಿಣ ಭಾರತೀಯರಿಲ್ಲದೇ ಒಟ್ಟು ಭಾರತದ ಇತಿ ಹಾಸ ಅಧ್ಯಯನಕ್ಕೆ ಒಳಪಡುವುದಾದರೂ ಹೇಗೆ? ಈ ದೇಶವನ್ನು ಅಂಬೆಗೆ ಹೋಲಿಸಿದ ವರು ನಾವು. ಹೆಣ್ಣನ್ನು ಪೂಜಿಸುವ ದೇಶದ ಸಂಸ್ಕೃತಿ ಅಧ್ಯಯನ ಮಾಡುವ ಸಮಿತಿಯಲ್ಲಿ ಮಹಿಳೆಗೆ ಸ್ಥಾನವೇ ಇಲ್ಲವಾಗಿದ್ದು ಹೇಗೆ? ಎಂದು ಕಿಡಿಕಾರಿದ್ದಾರೆ.

   ಇತಿಹಾಸ, ಸಂಸ್ಕೃತಿ ವಿಚಾರವಾಗಿ ಪೂರ್ವಾಗ್ರಹಗಳನ್ನು ಹೊಂದಿರುವಂತೆ ಕಾಣುವ, ಉತ್ತರ ಭಾರತೀಯರೇ ತುಂಬಿರುವ ಈ ಸಮಿತಿ ನಡೆಸುವ ಅಧ್ಯಯನದ ವಸ್ತುನಿಷ್ಠತೆ ಬಗ್ಗೆ ಅನುಮಾನಗಳು ದಟ್ಟವಾಗಿವೆ. ಸಮಿತಿಯ ಪುನಾರಚನೆ ಮಾಡುವುದು ಅತ್ಯಗತ್ಯ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕೂಡಲೇ ನಿರ್ಧಾರ ಕೈಗೊಳ್ಳಲಿ ಎಂದು ಆಗ್ರಹಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap