ಬೆಂಗಳೂರು:

ಕಾಂಗ್ರೆಸ್ ಗೆ ತಲೆನೋವಾಗಿ ಪರಿಣಮಿಸಿರುವ ತೃಪ್ತರ ನರ್ಹತೆ ಸಂಬಂಧ ಸ್ಪೀಕರ್ ಅವರಿಗೆ ಕಾಂಗ್ರೆಸ್ ಸಲ್ಲಿಸಿದ್ದ ವಿಚಾರಣಾ ಅರ್ಜಿಯನ್ನು ಮುಂದೂಡಲಾಗಿದೆ
ಪಕ್ಷಾಂತರ ನಿಷೇಧ ಕಾಯ್ದೆಯನ್ನು ಉಲ್ಲಂಘಿಸಿರುವ ಆರೋಪದ ಮೇಲೆ ಕಾಂಗ್ರೆಸ್‍ನ ನಾಲ್ವರು ಶಾಸಕರ ವಿರುದ್ಧ ಪ್ರಕರಣದ ವಿಚಾರಣೆಯನ್ನು ಸಭಾಧ್ಯಕ್ಷ ರಮೇಶ್ ಕುಮಾರ್ ಮುಂದೂಡಿದ್ದಾರೆ.
ಪಕ್ಷದಿಂದ ಬಂಡಾಯ ಎದ್ದಿದ್ದ ಶಾಸಕರಾದ ಉಮೇಶ್ ಜಾಧವ್, ರಮೇಶ್ ಜಾರಕಿಹೊಳಿ, ನಾಗೇಂದ್ರ ಹಾಗೂ ಮಹೇಶ್ ಕುಮಟಹಳ್ಳಿ ಅವರಿಗೆ ವಿಪ್ ಜಾರಿಯಾಗಿದ್ದರೂ ಕಾಂಗ್ರೆಸ್ ಶಾಸಕಾಂಗ ಸಭೆಗೆ ಸತತ ಗೈರು ಹಾಜರಾಗಿದ್ದು, ಇವರ ವಿರುದ್ಧ ಶಾಸಕಾಂಗ ನಾಯಕ ಸಿದ್ದರಾಮಯ್ಯ ಅವರು ಸ್ಪೀಕರ್ ಗೆ ದೂರು ನೀಡಿ, ಪಕ್ಷಾಂತರ ನಿಷೇಧ ಕಾಯಿದೆ ಅನ್ವಯ ಕ್ರಮ ಜರುಗಿಸಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದರು.
ನಿನ್ನೆ ವಿಚಾರಣೆ ಕೈಗೆತ್ತಿಕೊಳ್ಳಲು ಸಭಾಧ್ಯಕ್ಷ ರಮೇಶ್ ಕುಮಾರ್ ನಿರ್ಧರಿಸಿದ್ದರು. ವಿಚಾರಣೆಗೆ ಹಾಜರಾಗುವಂತೆ ಶಾಸಕರಿಗೆ ನೋಟಿಸ್ ಕಳುಹಿಸಲಾಗಿತ್ತು. ಆದರೆ ಇದೀಗ ವಿಚಾರಣೆಯನ್ನೇ ಮುಂದೂಡಲಾಗಿದ್ದು, ಬದಲಿ ದಿನಾಂಕವನ್ನು ತಿಳಿಸುವುದಾಗಿ ವಿಧಾನಸಭೆ ಅಧ್ಯಕ್ಷರ ಕಾರ್ಯಾಲಯ ನೀಡಿರುವ ಸೂಚನೆಯಲ್ಲಿ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
