ಹಾವೇರಿ
ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ವಿಕಲಚೇತನರು ಹಾಗೂ ಹಿರಿಯ ನಾಗರಿಕರು ಸುಗಮವಾಗಿ ಮತದಾನದಲ್ಲಿ ಪಾಲ್ಗೊಳ್ಳಲು ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಎಲ್ಲ ವ್ಯವಸ್ಥೆಯನ್ನು ಮಾಡಲಾಗಿದ್ದು, ತಪ್ಪದೇ ಮತಚಾಲಯಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷೆ ಶ್ರೀಮತಿ ಕೆ.ಲೀಲಾವತಿ ಅವರು ಮನವಿ ಮಾಡಿಕೊಂಡಿದ್ದಾರೆ.
ಸಾರಿಗೆ ವ್ಯವಸ್ಥೆ, ಮತಗಟ್ಟೆಗೆ ಅಡೆತಡೆರಹಿತ ವಾತಾವರಣಕ್ಕಾಗಿ ರ್ಯಾಂಪ್ ಹಾಗೂ ವೀಲ್‍ಚೇರ್, ಭೂತಗನ್ನಡಿ, ವೈಟ್‍ಕೇನ್, ಶೌಚಾಲಯ ಹಾಗೂ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಲಾಗಿದೆ ಹಾಗೂ ಮತದಾನದ ದಿನದಂದು ವಿಕಲಚೇತನರಿಗೆ ಹಾಗೂ ಹಿರಿಯ ನಾಗರಿಕರಿಗೆ ಮತದಾನ ಮಾಡಲು ಯಾವುದೇ ಸರತಿ ಸಾಲಿನಲ್ಲಿ ನಿಲ್ಲದೇ ನೇರವಾಗಿ ಮತ ಚಲಾಯಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ಮುಕ್ತ ಹಾಗೂ ಪಾರದರ್ಶಕ ಚುನಾವಣೆಗಾಗಿ ತಮ್ಮ ಪವಿತ್ರವಾದ ಮತವನ್ನು ಯಾವುದೇ ಆಮಿಷಕ್ಕೆ ಒಳಗಾಗದೆ ಚಲಾಯಿಸಿ ಪ್ರಜಾಪ್ರಭುತ್ವವನ್ನು ಬಲಪಡಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
