ಬಳ್ಳಾರಿ:
ವಿಶೇಷ ಭೂಸ್ವಾಧೀನ ಕಚೇರಿಯಲ್ಲಿ ಪರಿಹಾರ ಪಡೆಯಲು ಬರುವವರಿಂದ ಲಂಚದ ಬೇಡಿಕೆ ಇಡುತ್ತಿದ್ದ ಇಬ್ಬರು ಅಧಿಕಾರಿಗಳು ಎಸಿಬಿ ಬಲೆಗೆ ಬಿದ್ದಿದ್ದಾರೆ.ಬಂಧಿತರನ್ನ ಸದ್ಯ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.ರಾಷ್ಟ್ರೀಯ ಹೆದ್ಧಾರಿ ನಿರ್ಮಾಣಕ್ಕಾಗಿ ಭೂಮಿ ಕಳೆದುಕೊಂಡಿದ್ದ ರೈತ ಎ.ವೆಂಕಟರಮಣ ಅವರು ಪರಿಹಾರ 1,04,828 ಪಡೆಯಲು ಬಳ್ಳಾರಿ ವಿಶೇಷ ಭೂಸ್ವಾಧೀನ ಕಚೇರಿ ಹಾಗೂ ಭಾರತೀಯ ರಾಷ್ಟ್ರೀಯ ಹೆದ್ದಾರಿಗಳ ಪ್ರಾಧಿಕಾರ ಕಚೇರಿಗೆ ಭೇಟಿ ನೀಡಿದ್ದರು.
ಆರೋಪಿಗಳಾದ ಇಸ್ಮಾಯಿಲ್ ಸಾಹೇಬ್ ಶಿರಹಟ್ಟಿ ಮತ್ತು ಕೆ.ಸಿದ್ದಪ್ಪ 8 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ಅಲ್ಲದೆ, ದೂರವಾಣಿ ಮೂಲಕವೂ ಲಂಚ ಕೇಳಿದ್ದರು. ಲಂಚ ನೀಡಲು ನಿರಾಕರಿಸಿದ ವೆಂಕಟರಮಣ ಇಂದು ಬೆಳಿಗ್ಗೆ 9 ಗಂಟೆಗೆ ಎಸಿಬಿಗೆ ದೂರು ನೀಡಿದ್ದರು. ದೂರವಾಣಿ ಮೂಲಕ ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದನ್ನು ರೆಕಾರ್ಡ್ ಮಾಡಿಕೊಂಡು ಎಸಿಬಿಗೆ ನೀಡಿದ್ದಾರೆ. ಎಸಿಬಿ ಅಧಿಕಾರಿಗಳು ಮತ್ತು ಸಿಬ್ಬಂದಿ ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ