ಬೆಂಗಳೂರು
ನವೆಂಬರ್ 6 ರಂದು ನಡೆಯಲಿರುವ ನರಕ ಚತುರ್ದಶಿ ಹಾಗೂ ಬಲಿಪಾಡ್ಯಮಿ ಪ್ರಯುಕ್ತ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಕೆ.ಎಸ್.ಆರ್.ಟಿ.ಸಿ 1500 ಹೆಚ್ಚುವರಿ ಬಸ್‍ಗಳ ವ್ಯವಸ್ಥೆ ಮಾಡಿದೆ. ನವೆಂಬರ್ 2 ರಿಂದ ವಿಶೇಷ ಬಸ್‍ಗಳು ಸಂಚರಿಸಲಿವೆ. ರಾಜ್ಯ ಮತ್ತು ಅಂತಾರಾಜ್ಯದ ವಿವಿಧ ಸ್ಥಳಗಳಿಗೆ ಹೆಚ್ಚುವರಿ ಬಸ್‍ಗಳು ಸಂಚರಿಸಲಿವೆ.
ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗೀರ್, ಬೀದರ್, ತಿರುಪತಿ ಮತ್ತು ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ ನಡೆಸಲಿದೆ.
ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಇ-ಟಿಕೆಟ್ ಬುಕ್ಕಿಂಗ್‍ನ್ನು ತಿತಿತಿ.ಞsಡಿಣಛಿ.iಟಿ ವೆಬ್ ಸೈಟ್ ಮುಖಾಂತರ ಮಾಡಬಹುದಾಗಿದೆ.
ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟು ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್‍ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಕೆ.ಎಸ್.ಆರ್.ಟಿ.ಸಿ ಪ್ರಕಟಣೆ ತಿಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








