ಬೆಂಗಳೂರು
ನವಜಾತ ಹೆಣ್ಣುಮಗುವಿನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಕೊಲೆ ಶಂಕೆ ವ್ಯಕ್ತವಾಗಿರುವ ದುರ್ಘಟನೆ ಕೋನಪ್ಪನ ಅಗ್ರಹಾರದ ನಂಜುಂಡರೆಡ್ಡಿ ಲೇಔಟ್ ಬಳಿ ನಡೆದಿದೆ
ಮಗುವನ್ನು ಕೊಲೆ ಮಾಡಿ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಮೃತದೇಹದ ವಾಸನೆ ಬಂದ ಹಿನ್ನೆಲೆಯಲ್ಲಿ ಸ್ಥಳೀಯರು ಮಾಹಿತಿ ನೀಡಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಮೂರು ದಿನಗಳ ಹಿಂದೆ ಜನಿಸಿದ ಹೆಣ್ಣು ಮಗು ಎನ್ನುವುದು ಪೊಲೀಸರ ತಪಾಸಣೆಯಿಂದ ಕಂಡುಬಂದಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
