ಬೆಂಗಳೂರು
ಪೊಲೀಸ್ ಇಲಾಖೆಯಲ್ಲಿ ಕ್ರೀಡಾಪಟುಗಳ ನೇಮಕಾತಿಗೆ ಸರ್ಕಾರ ಆದ್ಯತೆ ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಗೋವಿಂದ ರಾಜು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ವಿಧಾನ ಸೌಧ ಮುಂಭಾಗದಲ್ಲಿಂದು ಬೆಳಗಾವಿಯಿಂದ ಬೆಂಗಳೂರಿಗೆ ಆಗಮಿಸಿದ ಮಹಿಳಾ ಪೊಲೀಸ್ ಸೈಕಲ್ ಜಾಥಾದಲ್ಲಿ ಭಾಗಿಯಾಗಿದ್ದ ಸಿಬ್ಬಂದಿಯನ್ನು ಸನ್ಮಾನಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಕ್ರೀಡಾಪಟುಗಳನ್ನು ಪೊಲೀಸ್ ಇಲಾಖೆಗೆ ನೇಮಕ ಮಾಡಿಕೊಳ್ಳುವ ವಿಚಾರ ಸರ್ಕಾರದ ಅಂತಿಮ ಪರಿಶೀಲನೆಯಲ್ಲಿದೆ. ನಾಳೆ ಈ ಸಂಬಂಧ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಮಾತುಕತೆ ಮಾಡಿ ಸಾಧ್ಯವಾದಷ್ಟು ಬೇಗ ಇದನ್ನು ಜಾರಿಗೆ ತರಲಾಗುವುದು ಎಂದರು.
ಇದೊಂದು ಉತ್ತಮ ಕೆಲಸವಾಗಿದ್ದು, ದಕ್ಷಿಣ ಭಾರತದ ಇತರೆ ರಾಜ್ಯಗಳಿಗೂ ವಿಸ್ತರಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಕರ್ನಾಟಕ ಒಲಂಪಿಕ್ ಸಂಘದ ವತಿಯಿಂದ 25 ಹಾಗೂ ದಾನಿಗಳ ಸಹಕಾರದಿಂದ 25 ಸೈಕಲ್‍ಗಳನ್ನು ಪೊಲೀಸ್ ಇಲಾಖೆಗೆ ಕೊಡಿಸುವ ಭರವಸೆ ನೀಡಿದರಲ್ಲದೇ, ಬಿಬಿಎಂಪಿ ಮೇಯರ್ ನಿಧಿಯಿಂದ 25 ಲಕ್ಷ ರೂಪಾಯಿ ನೆರವು ನೀಡುವಂತೆಯೂ ಅವರು ಮನವಿ ಮಾಡಿದರು.
ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಬಾಯಿ ಮಾತನಾಡಿ, ಮಹಿಳಾ ಪೊಲೀಸ್ ಸಿಬ್ಬಂದಿಗೆ ಮೂಲಸೌಲಭ್ಯ ಕಲ್ಪಿಸಿಕೊಡಲು ಸರ್ಕಾರ ಹೆಚ್ಚಿನ ಆಸಕ್ತಿ ವಹಿಸಿಬೇಕು. ಪೆಲೀಸ್ ಇಲಾಖೆಯಲ್ಲಿ ಇದೊಂದು ಮಾದರಿ ಮತ್ತು ವಿನೂತನ ಕಾರ್ಯಕ್ರಮ ಎಂದು ಅವರು ಹೇಳಿದರು. ಬೆಂಗಳೂರು ನಗರದಲ್ಲಿ ಸದ್ಯ ಎರಡು ಮಹಿಳಾ ಪೊಲೀಸ್ ಠಾಣೆಗಳು ಕಾರ್ಯ ನಿರ್ವಹಿಸುತ್ತಿದ್ದು, ಮಹಿಳೆಯರ ಸುರಕ್ಷತೆಗಾಗಿ ಬೆಂಗಳೂರು ನಗರದಲ್ಲೇ ಕನಿಷ್ಠ 10 ಪೆಲೀಸ್ ಠಾಣೆಗಳನ್ನು ಆರಂಭಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು. ಬಿಬಿಎಂಪಿ ಮೇಯರ್ ಗಂಗಾಂಭಿಕ ಮಲ್ಲಿಕಾರ್ಜುನ್ ಮಾತನಾಡಿ, ಮಹಿಳೆ ಅಬಲೆ ಅಲ್ಲ ಸಬಲೆ ಎಂಬುದನ್ನು ಈ ಕಾರ್ಯಕ್ರಮ ಸಾಬಿತು ಮಾಡಿದ್ದು, ಮಹಿಳೆಯರಲ್ಲಿ ಜಾಗೃತಿ ಮೂಡಿಸಲು ನೆರವಾಗಿದೆ ಎಂದ ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








