ಶ್ರೀ ಚನ್ನಪ್ಪ ಸ್ವಾಮಿಗಳ ಬೆಳ್ಳಿ ರಥೋತ್ಸವ

ಹೊನ್ನಾಳಿ:

    ಪ್ರತಿ ಅಮಾವಾಸ್ಯೆ ರಾತ್ರಿ ಇಲ್ಲಿನ ಹಿರೇಕಲ್ಮಠದಲ್ಲಿ ಶ್ರೀ ಚನ್ನಪ್ಪ ಸ್ವಾಮಿಗಳ ಬೆಳ್ಳಿ ರಥೋತ್ಸವ ನೆರವೇರಿಸಲಾಗುವುದು. ನಂತರ ಸಂಸ್ಕೃತಿ, ಸಂಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಸದ್ಭಕ್ತರು ಮಠಕ್ಕೆ ಆಗಮಿಸಿ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಒಡೆಯರ್ ಡಾ. ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

        ಇಲ್ಲಿನ ಹಿರೇಕಲ್ಮಠದಲ್ಲಿ ಶನಿವಾರ ರಾತ್ರಿ ಬೆಳ್ಳಿ ರಥೋತ್ಸವಕ್ಕೆ ಚಾಲನೆ ನೀಡಿ ನಂತರ ನಡೆದ ಸಂಸ್ಕೃತಿ, ಸಂಸ್ಕಾರ ಕಾರ್ಯಕ್ರಮದ ಸಾನಿಧ್ಯ ವಹಿಸಿ ಅವರು ಮಾತನಾಡಿದರು.

        ಭಕ್ತರ ಸಹಕಾರದಿಂದ ಅತ್ಯಂತ ಕಡಿಮೆ ಅವಧಿಯಲ್ಲಿ ಬೆಳ್ಳಿರಥ ನಿರ್ಮಾಣವಾಗಿ ಶ್ರೀ ಚನ್ನಪ್ಪ ಸ್ವಾಮಿಗಳ ಬೆಳ್ಳಿರಥೋತ್ಸವ ಅತ್ಯಂತ ವಿಜೃಭಣೆಯಿಂದ ನಡೆದಿದ್ದು ಲಿಂ. ಒಡೆಯರ್ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳ ಆತ್ಮಕ್ಕೆ ಶಾಂತಿ ಲಭಿಸಿ ನಮ್ಮನ್ನೆಲ್ಲಾ ಹರಸಿದ್ದಾರೆ ಎಂದು ತಿಳಿಸಿದರು.

       ಶ್ರೀ ಚನ್ನಪ್ಪ ಸ್ವಾಮಿಗಳ ಬೆಳ್ಳಿ ರಥೋತ್ಸವದ ನಂತರ ಮಕ್ಕಳಿಗೋಸ್ಕರ ಸಂಸ್ಕೃತಿ, ಸಂಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಇದರಡಿಯಲ್ಲಿ ದೇಸಿ ಕಲಾ ಪ್ರಕಾರಗಳು ಅನಾವರಣಗೊಳ್ಳುವಂತೆ ಉತ್ತೇಜನ ನೀಡಲಾಗುತ್ತಿದೆ ಎಂದು ಹೇಳಿದರು.ಇಂದಿನ ದಿನಗಳಲ್ಲಿ ಮಕ್ಕಳು ಮೊಬೈಲ್ ಹಿಡಿದು ದಿಕ್ಕು ತಪ್ಪುವ ಸಂಭವವುಂಟು. ಪ್ರತಿ ಅಮಾವಾಸ್ಯೆಯಲ್ಲಿ ಚನ್ನಪ್ಪ ಸ್ವಾಮಿಗಳ ಬೆಳ್ಳಿ ರಥೋತ್ಸವ ಕಾರ್ಯಕ್ರಮದ ನಂತರ ನಡೆಯುವ ಸಂಸ್ಕೃತಿ, ಸಂಸ್ಕಾರ ಕಾರ್ಯಕ್ರಮಕ್ಕೆ ಪೋಷಕರು ತಮ್ಮ ಮಕ್ಕಳನ್ನು ತಪ್ಪದೇ ಕರೆದುಕೊಂಡು ಬರಬೇಕು. ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಪ್ರೋತ್ಸಾಹ ನೀಡಬೇಕು ಎಂದು ವಿವರಿಸಿದರು.

       ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆ ಅರಳಲು ಹಿರೇಕಲ್ಮಠದಲ್ಲಿ ನಡೆಯುವ ಸಂಸ್ಕೃತಿ, ಸಂಸ್ಕಾರ ಕಾರ್ಯಕ್ರಮ ಸಹಕಾರಿಯಾಗಿದೆ. ಕಾರ್ಯಕ್ರಮದಲ್ಲಿ ಭಕ್ತಿಗೀತೆ, ಜಾನಪದ, ಭಾವಗೀತೆ, ಭರತ ನಾಟ್ಯ, ಏಕ ಪಾತ್ರಾಭಿನಯ, ಅಣಕು ಸೇರಿದಂತೆ ವಿವಿಧ ಕಲಾ ಪ್ರಕಾರಗಳ ಪ್ರದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದರು.

       ನಿವೃತ್ತ ಮುಖ್ಯ ಶಿಕ್ಷಕ ಎಂಪಿಎಂ ವಿಜಯಾನಂದಸ್ವಾಮಿ, ಗುರುಪ್ರಕಾಶ್, ದೊಡ್ಡೆತ್ತಿನಹಳ್ಳಿ ಗ್ರಾಮದ ಮುಖಂಡ ತೀರ್ಥಪ್ಪ ಮಾತನಾಡಿದರು. ಮಾರಿಕೊಪ್ಪ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ದೊಡ್ಡೆತ್ತಿನಹಳ್ಳಿ ಗ್ರಾಮಸ್ಥರು ಪ್ರಸಾದದ ವ್ಯವಸ್ಥೆ ಮಾಡಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link
Powered by Social Snap