ಬೆಂಗಳೂರು:
ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಕೊರೊನಾ ವೈರಸ್ ಸೋಂಕು ದೃಡವಾಗಿದೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಇಂದು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೊರೊನ ಪಾಸಿಟಿವ್ ಬಂದಿದೆ. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನನ್ನ ಇಲಾಖೆ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳೂ ಜೀವದ ಹಂಗು ತೊರೆದು ಮಹಾಮಾರಿಯ ವಿರುದ್ಧ ಹಗಲಿರುಳೂ ಶ್ರಮಿಸುತ್ತಿವೆ ಎಂದಿದ್ದಾರೆ.