ಎಂ ಎನ್ ಕೋಟೆ :
ಗುಬ್ಬಿ ತಾಲ್ಲೂಕಿನ ಬಸವಪಟ್ಟಣ್ಣ ಗ್ರಾಮದ ಶ್ರೀ ಕರಿಯಮ್ಮದೇವಿಯ ಮಹಾ ರಥೋತ್ಸವ ಬುಧವಾರ ಮುಂಜಾನೆ ಸಾವಿರಾರು ಭಕ್ತರ ನಡುವೆ ವೈಭವದಿಂದ ನಡೆಯಿತ್ತು.
ಜಿಲ್ಲೆಯಿಂದ ಆಗಮಿಸಿ ಭಕ್ತರು ಅಮ್ಮನವರ ರಥವನ್ನು ಎಳೆದು ಪುನೀತರಾದರು. ಯಾವುದೇ ಅಹಿತರ ಘಟನೆ ನಡೆಯದಂತೆ ಚೇಳೂರು ಪೋಲೀಸರು ಸೂಕ್ತ ಬಂದೂಬಸ್ತ್ ವಹಿಸಿದ್ದರು.ಭಕ್ತಾಧಿಗಳಿಗೆ ಮಹಾ ದಾಸೋಹ ಏರ್ಪಡಿಸಲಾಗಿತ್ತು. ಅಮ್ಮನವರು ಜಾತ್ರಾ ಮಹೋತ್ಸವ ಅಂಗವಾಗಿ ಆರತಿ ಅಗ್ನಿಕೊಂಡ ಮಹೋತ್ಸವ ಹಾಗೂ ವಿವಿಧ ಉತ್ಸವಗಳು ನಡೆಯಲಿದೆ. ರಥೋತ್ಸವ ಅಂಗವಾಗಿ ಅಮ್ಮನವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಸಾವಿರಾರು ಭಕ್ತರು ಅಮ್ಮನವರ ದರ್ಶನ ಪಡೆದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








