ಪತ್ರಿಕೋದ್ಯಮ ಪ್ರಶಸ್ತಿ ಪ್ರಕಟಿಸಿದ ರಾಜ್ಯ ಸರ್ಕಾರ..!

ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗೆ ಪ್ರಜಾಪ್ರಗತಿ ಪತ್ರಿಕೆಯ ಸಂಪಾದಕರಾದ ಎಸ್. ನಾಗಣ್ಣ ಆಯ್ಕೆ 

ಬೆಂಗಳೂರು

     ಕನ್ನಡ ಪತ್ರಿಕೋದ್ಯಮದಲ್ಲಿ ಅನುಪಮ ಸೇವೆ ಸಲ್ಲಿಸಿರುವವರಿಗೆ ನೀಡಲಾಗುವ ಪ್ರತಿಷ್ಠಿತ ಟೀಯೆಸ್ಸಾರ್ ಸ್ಮಾರಕ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ಒಂದು ಕನ್ನಡ ಪತ್ರಿಕೆಯನ್ನು ಹುಟ್ಟು ಹಾಕಿ ಬೆಳೆಸಿದವರಿಗೆ ನೀಡಲಾಗುವ ವಿಶೇಷ ಗೌರವದ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ.

    ಅದರಂತೆ, 2017 ನೇ ದಿನದರ್ಶಿ ವರ್ಷದ ಟೀಯೆಸ್ಸಾರ್ ಸ್ಮಾರಕ ಪತ್ರಿಕೋದ್ಯಮ ಪ್ರಶಸ್ತಿಯು ಸಂಯುಕ್ತ ಕರ್ನಾಟಕ ಹಾಗೂ ಕರ್ಮವೀರ ಪತ್ರಿಕೆಯ ನಿವೃತ್ತ ಸಂಪಾದಕ ಧೃವರಾಜ್ ವೆಂಕಟರಾವ್ ಮುತಾಲಿಕ್ ದೇಸಾಯಿ ಅವರಿಗೆ ಹಾಗೂ 2018 ನೇ ದಿನದರ್ಶಿ ವರ್ಷದ ಇದೇ ಪ್ರಶಸ್ತಿಯು ಮೈಸೂರಿನ ಕನ್ನಡಿಗರ ಪ್ರಜಾ ನುಡಿ ಪತ್ರಿಕೆಯ ಸಂಪಾದಕ ಡಿ ಮಹಾದೇವಪ್ಪ ಅವರಿಗೆ ಲಭಿಸಿದೆ.

  ಅದೇ ರೀತಿ, 2017 ನೇ ದಿನದರ್ಶಿ ವರ್ಷದ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗೆ ತುಮಕೂರು ಪ್ರಾದೇಶಿಕ ಪತ್ರಿಕೆಯ ಸಂಪಾದಕ ಎಸ್. ನಾಗಣ್ಣ ಹಾಗೂ 2018 ನೇ ದಿನದರ್ಶಿ ವರ್ಷದ ಇದೇ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸುದ್ದಿ ಬಿಡುಗಡೆ ಪತ್ರಿಕೆಯ ಪ್ರಧಾನ ಸಂಪಾದಕ ಡಾ ಯು. ಪಿ. ಶಿವಾನಂದ ಅವರು ಭಾಜನರಾಗಿದ್ದಾರೆ.

    ತಲಾ ಎರಡು ಲಕ್ಷ ರೂ ನಗದು, ಸ್ಮರಣಿಕೆ ಹಾಗೂ ಫಲ-ತಾಂಬೂಲ ಒಳಗೊಂಡ ಈ ಎರಡೂ ಪ್ರಶಸ್ತಿಗಳಿಗೆ ಕರ್ನಾಟಕ ಉಚ್ಛ ನ್ಯಾಯಲಯದ ನಿವೃತ್ತ ನ್ಯಾಯಾಧೀಶರಾದ ನ್ಯಾಯಮೂರ್ತಿ ಶ್ರೀ ಡಿ. ವಿ. ಶೈಲೇಂದ್ರ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಸರ್ಕಾರ ಆಯ್ಕೆ ಸಮಿತಿಯನ್ನು ರಚಿಸಿತ್ತು.

    ಅಂತೆಯೇ ಜನವರಿ ಮೊದಲನೇ ವಾರದಲ್ಲಿ ನಡೆಯಲಿರುವ ವಿಶೇಷ ಸಮಾರಂಭದಲ್ಲಿ ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ಅವರು ಈ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ. ಅಲ್ಲದೇ, 2016 ನೇ ದಿನದರ್ಶಿ ವರ್ಷದ ಟೀಯೆಸ್ಸಾರ್ ಸ್ಮಾರಕ ಪತ್ರಿಕೋದ್ಯಮ ಪ್ರಶಸ್ತಿಗೆ ಆಯ್ಕೆಯಾಗಿರುವ ಪ್ರಜಾವಾಣಿ ಪತ್ರಿಕೆಯ ನಿವೃತ್ತ ಸಹ ಸಂಪದಾಕ ಶ್ರೀ ನಾಗೇಶ್ ಹೆಗಡೆ ಹಾಗೂ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗೆ ಭಾಜನರಾಗಿರುವ ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಮುಂಜಾವು ದಿನ ಪತ್ರಿಕೆಯ ಸಂಪಾದಕ ಶ್ರೀ ಗಂಗಾಧರ ಹಿರೇಗುತ್ತಿ ಅವರಿಗೂ ಕೂಡಾ ತಲಾ ಎರಡು ಲಕ್ಷ ರೂ. ನಗದು ಒಳಗೊಂಡ ಈ ಪ್ರಶಸ್ತಿಗಳನ್ನು ಮುಖ್ಯಮಂತ್ರಿಯವರು ಪ್ರದಾನ ಮಾಡಲಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap