ಚಿತ್ರದುರ್ಗ;
ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಚಿತ್ರದುರ್ಗದ ಪ್ರತಿಷ್ಟಿತ ಎಸ್‍ಆರ್‍ಎಸ್ ಕಾಲೇಜಿನ ವಿದ್ಯಾರ್ಥಿನಿ ಕು.ತುಳಸಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ 6ನೇ ರ್ಯಾಂಕ್ ಪಡೆದು ಕಾಲೇಜಿನ ಇತಿಹಾಸದಲ್ಲಿ ದಾಖಲೆ ಬರೆದಿದ್ದಾರೆ
ಈ ಭಾರಿಯ ಪಲಿತಾಂಶದಲ್ಲಿ ಎಸ್ ಆರ್ ಎಸ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ಹಿಂದಿನ ಎಲ್ಲಾ ದಾಖಲೆಗಳನ್ನು ಮೀರಿ ಹೊಸ ಇತಿಹಾಸ ಬರೆದಿದ್ದಾರೆ. ಕಳೆದ ಮಾರ್ಚಿನಲ್ಲಿ ನಡೆದ ಪರೀಕ್ಷೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಕಾಲೇಜಿನ ವಿದ್ಯಾರ್ಥಿ ತುಳಸಿ ಟಿ. ವಾಣಿಜ್ಯ ವಿಭಾಗದಲ್ಲಿ 600ಕ್ಕೆ 590 ಅಂಕಗಳೊಂದಿಗೆ ರಾಜ್ಯಕ್ಕೆ 6ನೇ ರ್ಯಾಂಕ್ ಪಡೆದು ದಾಖಲೆ ನಿರ್ಮಿಸಿದ್ದಾಳೆ ಎಂದು ಸಂಸ್ಥೆಯ ಅಧ್ಯಕ್ಷ ಬಿ.ಎ.ಲಿಂಗಾರೆಡ್ಡಿ ತಿಳಿಸಿದ್ದಾರೆ
ಕು. ನೀಲಾ ಪ್ರಸಾದ್ 600ಕ್ಕೆ 585 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಪಡೆದರೆ, ಕು.ನಿಶಿತ ಎಸ್. 579 ಅಂಕಗಳೊಂದಿಗಿ ತೃತೀಯ ಸ್ಥಾನದಲ್ಲಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಕು. ರಮ್ಯ ಎಚ್ ಎನ್, ಅವಿನಾಶ್‍ಕುಮಾರ್ ಕೆ, ಸಿದ್ಧಾರ್ಥ್ ನಾಯಕ್ ಎಂ. ಈ ವಿದ್ಯಾರ್ಥಿಗಳು 600ಕ್ಕೆ ತಲಾ 579 ಅಂಕಗಳೊಂದಿಗೆ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ವಿವಿಧ ವಿಷಯಗಳಲ್ಲಿ 100ಕ್ಕೆ 100 ಅಂಕಗಳನ್ನು ಒಟ್ಟು 25 ವಿದ್ಯಾರ್ಥಿಗಳು ಪಡೆದುಕೊಂಡಿದ್ದು, 101 ವಿದ್ಯಾರ್ಥಿಗಳು ಡಿಸ್ಟಿಂಕ್ಷನಲ್ಲಿ ತೇರ್ಗಡೆಹೊಂದಿದ್ದಾರೆ ಎಂದು ಅವರು ತಿಳಿಸಿದ್ದಾರೆ.ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ತಂದುಕೊಟ್ಟ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷ ಬಿ.ಎ.ಲಿಂಗಾರೆಡ್ಡಿ, ಕಾರ್ಯದರ್ಶಿ ಸುಜಾತಲಿಂಗಾರೆಡ್ಡಿ, ಉಪಾಧ್ಯಕ್ಷ ಬಿ.ಎಲ್.ಅಮೋಘ್, ಪ್ರಾಚಾರ್ಯ ಗಂಗಾಧರ್, ಆಡಳಿತಾಧಿಕಾರಿ ಡಾ.ಟಿ.ಎಸ್.ರವಿ ಅಭಿನಂದಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
