ದಾವಣಗೆರೆ:
ಯಾವುದೇ ಅಭಿವೃದ್ಧಿ ಕಾರ್ಯಕೈಗೊಳ್ಳದ ಸಂಸದ ಜಿ.ಎಂ. ಸಿದ್ದೇಶ್ವರ ಹಾಗೂ ಶಾಸಕ ಎಸ್.ಎ. ರವೀಂದ್ರನಾಥ್ ಅವರುಗಳು ಯಾದಕ್ಕೂ ಉಪಯೋಗಕ್ಕೆ ಬಾರದ ಗೊಡ್ಡೆಮ್ಮೆಗಳಾಗಿದ್ದಾರೆಂದು ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಟೀಕಿಸಿದ್ದಾರೆ.
ನಗರದ ಶ್ರೀಲಿಂಗೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಯಿಸಿದ ಡಾ.ಶಾಮನೂರು ಶಿವಶಂಕರಪ್ಪನವರು, ಬಿಜೆಪಿಯ ಸಂಸದ ಸಿದ್ದೇಶ್ವರ, ಶಾಸಕ ರವೀಂದ್ರನಾಥ್ ಅವರು ಯಾವುದೇ ಉಪಯೋಗಕ್ಕೂ ಬರುವುದಿಲ್ಲ. ಯಾರಿಗೂ ಒಂದು ಬಿಲ್ಲೆ ಕೊಡುವುದಿಲ್ಲ.
ಅಭಿವೃದ್ಧಿ ವಿಷಯದಲ್ಲಿ ಅವರು ಯಾವುದೇ ಕೆಲಸ ಮಾಡಿಲ್ಲ ಎಂದು ಕಿಡಿಕಾರಿದರು.ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯನ್ನು ಕಡೆಗಣಿಸಿದ್ದಾರೆಂಬ ಪ್ರಶ್ನೆಗೆ ಉತ್ತರಿಸಿದ ಶಾಮನೂರು, ಜಿಲ್ಲಾ ಸಚಿವರು ಬರದಿದ್ದರೇನು ನಾವೇ ಎಲ್ಲವನ್ನೂ ಅಭಿವೃದ್ದಿ ಮಾಡುತ್ತೇವೆ ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ