ಬೆಂಗಳೂರು
ಬಿಗಿ ಪೊಲೀಸ್ ಭದ್ರತೆಯಲ್ಲಿ ಗುರುವಾರದಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ಆರಂಭವಾಗಿದ್ದು, ಮೊದಲ ದಿನ ಕನ್ನಡ ಸೇರಿದಂತೆ ಪ್ರಥಮ ಭಾಷೆ ಪರೀಕ್ಷೆಯನ್ನು ವಿದ್ಯಾರ್ಥಿಗಳು ಬರೆದರು.ಎಸ್‍ಎಸ್‍ಎಲ್‍ಸಿ ಮೊದಲ ದಿನದ ಪರೀಕ್ಷೆಯು 2,857 ಪರೀಕ್ಷಾ ಕೇಂದ್ರಗಳಲ್ಲಿ ನಡೆದಿದ್ದು ಪರೀಕ್ಷೆಗೆ ಕಟ್ಟಿರುವ ಸುಮಾರು 8,41,666 ವಿದ್ಯಾರ್ಥಿಗಳಲ್ಲಿ ಬಹುತೇಖ ಮಂದಿ ಹಾಜರಾಗಿದ್ದಾರೆ.
ರಾಜ್ಯದಲ್ಲಿ 46 ಸೂಕ್ಷ್ಮ ಮತ್ತು 7 ಅತಿಸೂಕ್ಷ್ಮ ಕೇಂದ್ರಗಳನ್ನು ಗುರ್ತಿಸಿ ಭಾರಿ ಭದ್ರತೆ ಒದಗಿಸಲಾಗಿದ್ದು, ವಿದ್ಯಾರ್ಥಿಗಳು ನಕಲು ಮಾಡದಂತೆ ನಿಗಾ ಇಡಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಸ್ಕ್ವಾಡ್ ಅಧಿಕಾರಿಗಳು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಈ ಭಾರಿಯೂ ಪರೀಕ್ಷಾ ಕೇಂದ್ರಗಳಿಗೆ ಸಿಸಿ ಟಿವಿ ಅಳವಡಿಸಲಾಗಿದೆ. ಸ್ಮಾರ್ಟ್‍ಫೆÇೀನ್, ಮೊಬೈಲ್ ಮತ್ತಿತರ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಕೇಂದ್ರಗಳಿಗೆ ನಿಯೋಜಿಸಲ್ಪಟ್ಟ ಸಿಬ್ಬಂದಿಗಳು ಪ್ರತಿ ವಿದ್ಯಾರ್ಥಿಗಳನ್ನು ಪರಿಶೀಲಿಸಿದ ಬಳಿಕವೇ ಪರೀಕ್ಷಾ ಕೇಂದ್ರಗಳಿಗೆ ಕಳುಹಿಸಿದ್ದಾರೆ.
ಏಪ್ರಿಲ್ ಅಂತ್ಯಕ್ಕೆ ಫಲಿತಾಂಶ:
ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ಏ. 4ರವರೆಗೆ ನಡೆಯಲಿದೆ. ಏ. 10 ರಂದು ಮೌಲ್ಯಮಾಪನ ಆರಂಭವಾಗಲಿದ್ದು, 77 ಸಾವಿರ ಶಿಕ್ಷಕರು 230 ಮೌಲ್ಯ ಮಾಪನ ಕೇಂದ್ರಗಳಲ್ಲಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮಾಡಲಿದ್ದಾರೆ. ಏಪ್ರಿಲ್ ಕೊನೆಯ ವಾರದಲ್ಲಿ ಫಲಿತಾಂಶ ಪ್ರಕಟವಾಗಲಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








