ಮೇ 26ರಂದು ಎಸ್‍ಎಸ್‍ಎಂ ಶಾಲಾ ಕಟ್ಟಡ ಉದ್ಘಾಟನೆ

ದಾವಣಗೆರೆ:

    ಇಲ್ಲಿನ ಪಿ.ಬಿ.ರಸ್ತೆಯಲ್ಲಿರುವ ಪೈಲ್ವಾನ್ ಚನ್ನಬಸಪ್ಪ ಲೇಔಟ್‍ನಲ್ಲಿ ನೂತನವಾಗಿ ನಿರ್ಮಿಸಿರುವ ಎಸ್.ಎಸ್.ಎಂ. ರೆಸಿಡೆನ್ಸಿಯಲ್ ಪಬ್ಲಿಕ್ ಸ್ಕೂಲ್‍ನ ಶಾಲಾ ಕಟ್ಟಡದ ಉದ್ಘಾಟನಾ ಸಮಾರಂಭವು ಮೇ 26ರಂದು ನಡೆಯಲಿದೆ ಎಂದು ಶಾಲೆಯ ಆಡಳಿತಾಧಿಕಾರಿ ಕೆ.ಎಂ.ರಾಮಚಂದ್ರಪ್ಪ ತಿಳಿಸಿದರು.

     ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಸಂಜೆ 5.30ಕ್ಕೆ ಶಾಲಾ ಆವರಣದಲ್ಲಿ ತರಳಬಾಳು ಜಗದ್ಗುರು ಡಾ.ಶ್ರೀಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ನಡೆಯುವ ಕಾರ್ಯಕ್ರಮವನ್ನು ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಉದ್ಘಾಟಿಸಲಿದ್ದಾರೆ. ಸಚಿವ ಪಿ.ಟಿ.ಪರಮೇಶ್ವರ ನಾಯ್ಕ ನಾಮಫಲಕ ಅನಾವರಣಗೊಳಿಸಲಿದ್ದಾರೆ. ಸ್ಕೂಲ್ ಲೋಗೊವನ್ನು ಸಂಸದ ಜಿ.ಎಂ.ಸಿದ್ದೇಶ್ವರ್ ಅನಾವರಣಗೊಳಿಸುವರು.

      ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಕಚೇರಿ ಉದ್ಘಾಟಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಡಾ.ವೈ.ಎ.ನಾರಾಯಣಸ್ವಾಮಿ ತರಗತಿ ಕೊಠಡಿ ಉದ್ಘಾಟಿಸಲಿದ್ದಾರೆ. ವಿಪ ಸದಸ್ಯ ಚೌಡರೆಡ್ಡಿ ತೂಪಲ್ಲಿ ಶಾಲಾ ಕೈಪಿಡಿ ಬಿಡುಗಡೆ ಮಾಡಲಿದ್ದಾರೆ. ಮಾಜಿ ಶಾಸಕ ಎಂ.ಬಸವರಾಜ ನಾಯ್ಕ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆಂದು ಹೇಳಿದರು.

       ಮುಖ್ಯ ಅತಿಥಿಗಳಾಗಿ ಮಾಜಿ ಸಿಎಂ ಅವರ ಆಪ್ತ ಕಾರ್ಯದರ್ಶಿ ಬಿ.ಹೀರಾ ನಾಯ್ಕ, ಜಿ.ಪಂ. ಅಧ್ಯಕ್ಷೆ ಶೈಲಜಾ ಬಸವರಾಜ್, ಉಪಾಧ್ಯಕ್ಷ ಸುರೇಂದ್ರ ನಾಯ್ಕ, ಸದಸ್ಯೆ ಗೀತಾ ಗಂಗಾಧರ, ನಿವೃತ್ತ ನೋಂದಣಿ ಮಹಾ ಪರಿವೀಕ್ಷಕ ಭೋಜ್ಯನಾಯ್ಕ, ಪಾಲಿಕೆ ಮಾಜಿ ಸದಸ್ಯ ಶಿವನಹಳ್ಳಿ ರಮೇಶ್, ಡೂಡಾ ಆಯುಕ್ತ ಆದಪ್ಪ, ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ, ಬಿಇಒ ಬಿ.ಸಿದ್ದಪ್ಪ, ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷ ಬಿ.ಎನ್.ಮಲ್ಲೇಶ, ಎಂ.ಗುಡ್ಡಪ್ಪ, ಹೆಚ್.ಜಯರಾಜ್, ಗಂಗಾಧರ ರೆಡ್ಡಿ, ಅಬ್ದುಲ್ ಜಬ್ಬಾರ್, ಎಲ್.ಹಮಾಂತೇಶ ನಾಯ್ಕ, ಬಿ.ದಿಳ್ಯಪ್ಪ, ಮಂಜುನಾಥಯ್ಯ, ಕೆ.ಈಶಾ ನಾಯ್ಕ, ಎಂ.ಶಿವಕುಮಾರ್, ಸಿ.ಕೆ.ಸಿದ್ದಪ್ಪ ಮತ್ತಿತರರು ಭಾಗವಹಿಸಲಿದ್ದಾರೆಂದು ಮಾಹಿತಿ ನೀಡಿದರು.

       ಕಾರ್ಯಕ್ರಮದಲ್ಲಿ ಸರಿಗಮಪ ವಿಜೇತ ಹನುಮಂತ, ಚಿತ್ರ ನಟ ಅರ್ಜುನ್ ಚೌಹಾಣ್, ಜಾನಪದ ಕಲಾವಿದ ಉಮೇಶ್ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದರು.ಸುದ್ದಿಗೋಷ್ಠಿಯಲ್ಲಿ ಎಸ್‍ಎಸ್‍ಜಿಎಂ ಏಜ್ಯುಕೇಷನ್ ಅಂಡ್ ವೆಲ್ಫೇರ್ ಅಸೋಸಿಯೇಷನ್ ಕಾರ್ಯದರ್ಶಿ ಹೆಚ್.ಸವಿತಾ, ಸಂಸ್ಥೆಯ ಸಲಹೆಗಾರರಾದ ಜಗದೀಶ್ ಬಿ.ಟಿ, ಶಶಿಕುಮಾರ್, ಹರ್ಷ ಮತ್ತಿತರರು ಹಾಜರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link