ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ..!

ಬೆಂಗಳೂರು :

     ಲಾಕ್‍ಡೌನ್ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರ ಸಂಬಳ ಕಡಿತ ಮಾಡುವುದು ಅಥವಾ ತಡೆ ಹಿಡಿಯುವ ಕುರಿತು ಸಾಕಷ್ಟು ಚರ್ಚೆ ನಡೆಸಿದ ನಂತರ ಏಪ್ರಿಲ್ ತಿಂಗಳ ಸಂಬಳ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಸರ್ಕಾರ ತಿಳಿಸಿದೆ.

   ಈ ಮೊದಲು ಪ.ಬಂಗಾಳದ ಮಾದರಿಯಲ್ಲಿ ಸರ್ಕಾರಿ ನೌಕರರಿಗೆ ಸಂಬಳದಲ್ಲಿ ಯಾವುದೇ ಕಡಿತ ಮಾಡದೆ ಏಪ್ರಿಲ್ ತಿಂಗಳ ಸಂಬಳ ನೀಡಲು ಸರ್ಕಾರ ನಿರ್ಧಾರ ಕೈಗೊಂಡಿದ್ದು, ಆರ್ಥಿಕ ಹೊರೆ ಆದರೂ ಪರವಾಗಿಲ್ಲ ಸರ್ಕಾರಿ ನೌಕರರಿಗೆ ಸಂಬಳ ನೀಡಲು ಸರ್ಕಾರ ಮುಂದಾಗಿದೆ. ಈ ಹಿನ್ನೆಲೆ ಏಪ್ರಿಲ್ ಸಂಬಳ ಹಾಕುವ ನಿಟ್ಟಿನಲ್ಲಿ ಆರ್ಥಿಕ ಇಲಾಖೆ ಪ್ರಕ್ರಿಯೆ ಪ್ರಾರಂಭಿಸಿದೆ. ಸಂಬಳ ಬಿಡುಗಡೆ ಮಾಡಲು ಆರ್ಥಿಕ ಇಲಾಖೆಯಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.

      ಕೆಲ ದಿನಗಳ ಹಿಂದೆ ಸ್ವತಃ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಈಶ್ವರಪ್ಪನವರು ಈ ತಿಂಗಳು ಸರ್ಕಾರಿ ನೌಕರರಿಗೆ ಸಂಬಳ ನೀಡುವುದೇ ಕಷ್ಟಕರವಾಗಿದೆ. ನೌಕರರು ಯಾವುದಕ್ಕೂ ಸಿದ್ಧರಾಗಿರಬೇಕು ಎಂಬ ಹೇಳಿಕೆ ನೀಡಿದ್ದರು. ಆದರೆ ಇದೀಗ ಸರ್ಕಾರ ಏಪ್ರಿಲ್ ತಿಂಗಳ ಸಂಬಳಕ್ಕೆ ಅನುಮತಿ ನೀಡಿದ್ದು, ಈ ಮೂಲಕ ಸರ್ಕಾರಿ ನೌಕರರ ಮೊಗದಲ್ಲಿ ಮಂದಹಾಸ ಮೂಡಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link