ಬೆಂಗಳೂರು
ಬೆಂಗಳೂರು ನಗರ ಮತ್ತು ಗ್ರಾಮಾಂತರದಲ್ಲಿ ಸರ್ಕಾರಿ ಜಾಗದಲ್ಲಿ ಮನೆ ಕಟ್ಟಿಕೊಂಡಿದ್ದವರಿಗೆ ಸರ್ಕಾರ ಭರ್ಜರಿ ಗಿಫ್ಟ್ ನೀಡಲು ಮುಂದಾಗಿದೆ.
ಮನೆ ಕಟ್ಟಿಕೊಂಡಿರುವ ಬಡವರ ಹೆಸರಿಗೆ ಸೈಟು ನೋಂದಣಿ ಮಾಡಲಾಗುತ್ತದೆ ಎಂದು ಕಂದಾಯ ಸಚಿವರು ಮಾಹಿತಿ ನೀಡಿದ್ದಾರೆ.20/30, 30/40 ಅಳತೆಯಲ್ಲಿ ಕಟ್ಟಿರುವ ಮನೆಗಳ ಮಾಲೀಕರಿಗೆ ಹಕ್ಕುಪತ್ರ ನೀಡಲಾಗುತ್ತದೆ. ಸುಮಾರು 10 ಸಾವಿರ ಫಲಾನುಭವಿಗಳಿಗೆ ಹಕ್ಕುಪತ್ರ ನೀಡಲಾಗುವುದು ಎಂದು ತಿಳಿಸಿದ್ದಾರೆ
ಮನೆಗಳನ್ನು ಆ ಜಾಗಗಳಲ್ಲಿ ಕಟ್ಟಿ 10 ವರ್ಷದಿಂದ 30 ವರ್ಷದ ಅವಧಿ ಆಗಿರಬೇಕು. ಎಸ್ ಸಿ, ಎಸ್ ಟಿ 5 ಸಾವಿರ ರೂಪಾಯಿ ಹಣ ಕಟ್ಟಬೇಕು, ಸಾಮಾನ್ಯ ವರ್ಗದವರಿಗೆ 10 ಸಾವಿರ ಹಣ ಕಟ್ಟಬೇಕು ಎಂದು ತಿಳಿಸಲಾಗಿದೆ .ನ್ಯಾಷನಲ್ ಕಾಲೇಜು ಮೈದಾನದಲ್ಲಿ ಜನವರಿ 28ರಂದು ನಡೆಯುವ ಸಮಾರಂಭದಲ್ಲಿ ಸಿಎಂ ಯಡಿಯೂರಪ್ಪ ಹಕ್ಕುಪತ್ರ ವಿತರಣೆ ಮಾಡಲಿದ್ದಾರೆ ಎಂದು ತಿಳಿಸಿದರು.