ತುಘಲಕ್ ದರ್ಬಾರ್ ಆಡಳಿತವನ್ನು ನೆನಪಿಸಿದ ರಾಜ್ಯಾಡಳಿತ : ಬಿ.ಎಸ್. ಯಡಿಯೂರಪ್ಪ

0
14

ಧಾರವಾಡ

      ರಾಜ್ಯದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದ್ದು ವಿಧಾನಸೌಧದಲ್ಲೆ 26 ಲಕ್ಷ ರೂ. ಹಣ ಅಕ್ರಮವಾಗಿ ಸಿಕ್ಕಿರುವುದು ತುಘಲಕ್ ದರ್ಬಾರ್ ಆಡಳಿತವನ್ನು ನೆನಪಿಸುತ್ತದೆ.ಈ ಬಗ್ಗೆ ಸಮಗ್ರ ತನಿಖೆ ನಡೆಯಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಒತ್ತಾಯಿಸಿದ್ದಾರೆ.

ಇಲ್ಲಿ ನಡೆಯುತ್ತಿರುವ 84ನೇ ಕನ್ನಡ ಸಾಹಿತ್ಯ ಸಮ್ಮೇಳನದ ಕೊನೆಯ ದಿನ ಏರ್ಪಡಿಸಿದ್ದ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನುಡಿದಂತೆ ನಡೆದಿಲ್ಲ. ರಾಜ್ಯದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಜನ ಬರಗಾಲದಿಂದ ತತ್ತರಿಸುತ್ತಿದ್ದರೂ ಮುಖ್ಯಮಂತ್ರಿ ತೆರಿಗೆ ಹೆಚ್ಚಳ ಮಾಡಿದ್ದಾರೆ.

ಇದರಿಂದ ಜನ ಇನ್ನಷ್ಟು ಸಂಕಷ್ಟಕ್ಕೆ ಸಿಲುಕಲಿದ್ದಾರೆ. ರೈತರು ಬರ ಪರಿಸ್ಥಿತಿಯಿಂದ ತತ್ತರಿಸಿದ್ದಾರೆ. ಆದರೆ ಸರ್ಕಾರ ಸಮಸ್ಯೆ ಬಗೆಹರಿಸುವುದನ್ನು ಬಿಟ್ಟು ನಿರ್ಲಕ್ಷ್ಯವಹಿಸುತ್ತಿದೆ ಎಂದು ಆರೋಪಿಸಿದರು. ನಟ ಮತ್ತು ನಿರ್ಮಾಪಕರ ಮನೆ ಮೇಲೆ ನಡೆದ ಆದಾಯ ತೆರಿಗೆ ಇಲಾಖೆ ದಾಳಿಯ ಬಗ್ಗೆ ಪ್ರತಿಕ್ರಿಯಿಸಲು ಅವರು ನಿರಾಕರಿಸಿದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

LEAVE A REPLY

Please enter your comment!
Please enter your name here