ರಾಜ್ಯ ಸರ್ಕಾರದ ಬೊಕ್ಕಸ ಖಾಲಿಯಾಗಿದೆ : ಹೆಚ್ ಡಿ ಕುಮಾರಸ್ವಾಮಿ

ಬೆಂಗಳೂರು

    ಕೇಂದ್ರದ ಕೆಟ್ಟ ಆರ್ಥಿಕ‌ ನೀತಿ,ಜಿಡಿಪಿ,ದೇಶದ ಅಭಿವೃದ್ಧಿ ನುಂಗಿದ ಕೇಂದ್ರದ ನೀತಿಗಳು ಈಗ ರಾಜ್ಯದ ಮೇಲೂ ಪರಿಣಾಮ ಬೀರಿದ್ದು ,ರಾಜ್ಯದ ಖಜಾನೆ ಖಾಲಿಯಾಗಿದೆ. ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು ರಾಜ್ಯಕ್ಕೆ ಕೇಂದ್ರದಿಂದ ಬರಬೇಕಾದ ಬರ ಪರಿಹಾರ,ಅನುದಾನ, ತೆರಿಗೆ ಹಂಚಿಕೆಗಳನ್ನು ದಿಟ್ಟತನದಿಂದ ಕೇಳುವ ಶಕ್ತಿ  ಅವರಿಗಿಲ್ಲ.ನ್ಯಾಯವಾಗಿ ಬರಬೇಕಾದ್ದನ್ನು ಪಡೆಯಲಾಗದ ಯಡಿಯೂರಪ್ಪ  ಅವರು ದುರ್ಬಲ ಮುಖ್ಯಮಂತ್ರಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ. 

    ಮುದ್ರಾಂಕ ಮತ್ತು ನೋಂದಣಿ, ಮೋಟಾರು ವಾಹನ ಕ್ಷೇತ್ರ, ವಾಣಿಜ್ಯ ತೆರಿಗೆ ಬಹುದೊಡ್ಡ ಆದಾಯದ ಮೂಲವಾದರೂ ಅವುಗಳಿಂದ ಸಂಪನ್ಮೂಲ ಬಂದಿಲ್ಲ‌ದ್ದಕ್ಕೆ ಕಾರಣವೇನು? ಎಂದು ಪ್ರಶ್ನಿಸಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.ತೆರಿಗೆಯಲ್ಲಿ ರಾಜ್ಯಕ್ಕೆ ನೀಡಬೇಕಾದ ಪಾಲನ್ನೂ ಕೇಂದ್ರ ವಂಚಿಸಿದೆ‌. ರಾಜ್ಯಕ್ಕೆ ಬರಬೇಕಿದ್ದ ಪಾಲಿನಲ್ಲಿ 5.44% ರಷ್ಟು ಇನ್ನೂ ಬಂದಿಲ್ಲ. ಇದು ರಾಜ್ಯದ ಅಭಿವೃದ್ಧಿಯ ವಿಚಾರದಲ್ಲಿ ಕೇಂದ್ರದ ಮಲತಾಯಿ ಧೋರಣೆ. ಲೋಕಸಭೆ ಸ್ಥಾನಗಳ ಮೇಲೆ ಮಾತ್ರ ಕಣ್ಣಿಡುವ ಕೇಂದ್ರ ಇಲ್ಲಿನ ಬೇಕು ಬೇಡಗಳನ್ನು ನಿರ್ಲಕ್ಷಿಸುತ್ತದೆ.ಮೋದಿ ಈ ಬಗ್ಗೆ ತುಮಕೂರಿನಲ್ಲಿ ಮಾತನಾಡಬೇಕು ಎಂದು ಒತ್ತಾಯಿಸಿದ್ದಾರೆ.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ

    ಪ್ರಮಾಣವಚನ ಸ್ವೀಕರಿಸಿದ ಮರುದಿನ ರಾಜ್ಯದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿದೆ ಎಂದಿದ್ದರು ಆದರೀಗ ಪರಿಸ್ಥಿತಿ ವಿಷಮವಾಗಿದೆ.ರಾಜ್ಯದಿಂದ 25 ಸಂಸದರನ್ನು ಪಡೆದಿರುವ ಮೋದಿಯವರು, ಕೇಂದ್ರದ ಚಂದಮಾಮನನ್ನು ತೋರಿಸಿ ‘ಅನರ್ಹ ಸರ್ಕಾರ’ ರಚಿಸಿಕೊಂಡ ಯಡಿಯೂರಪ್ಪ ಅವರು ಶಿವಕುಮಾರ ಸ್ವಾಮೀಜಿಗಳು ಐಕ್ಯರಾಗಿರುವ ತುಮಕೂರಿನ ನೆಲದಲ್ಲಿ ನಿಂತು ಇವೆಲ್ಲಕ್ಕೂ ಉತ್ತರ ಕೊಡುವರೇ ಎಂದು ಸವಾಲು ಹಾಕಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link