ರಾಜ್ಯವೀಗ ನಾವಿಕನಿಲ್ಲದ ದೋಣಿಯಂತಾಗಿದೆ :ದಿನೇಶ್ ಗುಂಡೂರಾವ್

ಬೆಂಗಳೂರು

      ರಾಜ್ಯವೀಗ ನಾವಿಕನಿಲ್ಲದ ದೋಣಿಯಂತಾಗಿದೆ. ರಾಜ್ಯದಲ್ಲಿ ಕೊರೊನಾ ಕಂಟಕದ ನಡುವೆ ಪ್ರವಾಹ ಜನರನ್ನು ಬೀದಿಗೆ ತಂದು ನಿಲ್ಲಿಸಿದೆ ಎಂದು ಮಾಜಿ ಸಚಿವ ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ಬೇಸರ ವ್ಯಕ್ತಪಡಿಸಿದ್ದಾರೆ.

      ಕಳೆದ ಬಾರಿ ಪ್ರವಾಹ ರಾಜ್ಯದಲ್ಲಿ ದೊಡ್ಡಮಟ್ಟದ ಅನಾಹುತವನ್ನೇ ಸೃಷ್ಟಿಸಿತ್ತು. ಅದನ್ನು ಕಂಡಾದರೂ ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕಿತ್ತು. ಸರ್ಕಾರ ಇತಿಹಾಸದಿಂದ ಪಾಠ ಕಲಿಬೇಕಿತ್ತು. ಕೇವಲ 1 ವರ್ಷದ ಹಿಂದೆ ಸುರಿದ ಮಳೆ ಮಾಡಿದ ಅನಾಹುತ ಸರ್ಕಾರ ನಡೆಸುವವರ ಗಮನದಲ್ಲಿರಬೇಕಿತ್ತು. ಆದರೆ ಸರ್ಕಾರ ನಿರ್ಲಕ್ಷ ಧೋರಣೆ ತಾಳಿರುವುದು ರಾಜ್ಯದ ಜನರ ದುರದೃಷ್ಟವೆಂದು ದಿನೇಶ್ ಗುಂಡೂರಾವ್ ಟ್ವೀಟ್ ಮೂಲಕ ಹೇಳಿದ್ದಾರೆ.

      ಕೊರೊನಾ ಕಂಟಕವನ್ನು ನಿಯಂತ್ರಿಸುವಲ್ಲಿ ವಿಫಲವಾಗಿರುವ ಸರ್ಕಾರದ ಎದುರು ಈಗ ಪ್ರವಾಹವಿದೆ. ಕಳೆದ ಬಾರಿ ಸರ್ಕಾರ ಸಮರ್ಪಕ ಪ್ರವಾಹ ಪರಿಹಾರ ನೀಡುವಲ್ಲಿ ಜನರಿಗೆ ರಕ್ಷಣೆ ನೀಡುವಲ್ಲಿ ವಿಫಲವಾಗಿದೆ. ಈಗ ಮತ್ತೆ ಅಂತಹದ್ದೇ ಪರಿಸ್ಥಿತಿ ನಿರ್ಮಾಣವಾಗಿದೆ. ಇದೆಲ್ಲವನ್ನು ನೋಡಿದರೆ ರಾಜ್ಯ ನಾವಿಕನಿಲ್ಲದ ದೋಣಿಯಂತಾಗಿದೆ. ರಾಜ್ಯದ ಜನರನ್ನು ದೇವರೇ ಕಾಪಾಡಬೇಕು ಎಂದು ಸರ್ಕಾರದ ವೈಫಲ್ಯತೆಯನ್ನು ದಿನೇಶ್ ಗುಂಡೂರಾವ್ ಟೀಕಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap