ಏ.25ರಿಂದ ರಾಜ್ಯ ಮಟ್ಟದ ಭಜನೆ ಸ್ಪರ್ಧೆ

ದಾವಣಗೆರೆ :

     ನಗರದ ಕುವೆಂಪು ಕನ್ನಡ ಭವನದಲ್ಲಿ ಏ.25ರಿಂದ 28ರವರೆಗೆ ರಾಜ್ಯಮಟ್ಟದ ಭಜನಾ ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ಭಜನಾ ಸ್ಪರ್ಧೆ ಸಮಿತಿಯ ಸಂಘಟನಾ ಕಾರ್ಯದರ್ಶಿ ಎ.ಕೊಟ್ರಪ್ಪ ಕಿತ್ತೂರು ತಿಳಿಸಿದರು.

        ಈ ಕುರಿತು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.25ರಂದು ಬೆಳಗ್ಗೆ 11 ಗಂಟೆಗೆ ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ  ಎಸ್.ವಿ.ಹಲಸೆ ಸ್ಪರ್ಧೆಗೆ ಚಾಲನೆ ನೀಡುವರು. ತರಳಬಾಳು ಸಾಣೇಹಳ್ಳಿ ಶಾಖಾಮಠದ ಪಟ್ಟಾಧ್ಯಕ್ಷ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ದಿವ್ಯಸಾನಿಧ್ಯ

        ವಹಿಸುವರು. ಹೆಬ್ಬಾಳು ವಿರಕ್ತಮಠದ ಶ್ರೀ ಮಹಾಂತ ರುದ್ರೇಶ್ವರ ಸ್ವಾಮೀಜಿ, ಆವರಗೊಳ್ಳ ಪುರವರ್ಗ ಹಿರೇಮಠದ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ, ರಾಮಘಟ್ಟದ ಶ್ರೀ ರೇವಣಸಿದ್ದೇಶ್ವರ ಸ್ವಾಮೀಜಿ, ಯರಗುಂಟೆಯ ಶ್ರೀಪರಮೇಶ್ವರ ಸ್ವಾಮೀಜಿ ಉಪಸ್ಥಿತರಿರಲಿದ್ದಾರೆಂದು ಮಾಹಿತಿ ನೀಡಿದರು.

        ಏ.28ರಂದು ಸಂಜೆ 5.30ಕ್ಕೆ ಸ್ಪರ್ಧೆಯ ಮುಕ್ತಾಯ ಸಮಾರಂಭ ಶಿವಗೋಷ್ಠಿ ಸಮಿತಿ ಅಧ್ಯಕ್ಷ ಎಂ.ಬಿ.ಸೋಮಶೇಖರ ಗೌಡ್ರು ಅಧ್ಯಕ್ಷತೆಯಲ್ಲಿ ಜರುಗಲಿದೆ. ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಾ.ಹೆಚ್.ಎಸ್.ಮಂಜುನಾಥ ಕುರ್ಕಿ, ತಾಲೂಕು ಅಧ್ಯಕ್ಷ ಬಿ.ವಾಮದೇವಪ್ಪ, ಸ್ಪರ್ಧೆ ಸಮಿತಿ ಅಧ್ಯಕ್ಷ ಸದಾನಂದಪ್ಪ ಕುಕ್ಕುವಾಡ ಮತ್ತಿತರರು ಹಾಜರಿರುವರು. ನಾಲ್ಕು ದಿನಗಳ ಕಾಲ ನಡೆಯುವ ಭಜನಾ ಸ್ಪರ್ಧೆಯಲ್ಲಿ ಹರಪನಹಳ್ಳಿ, ಜಗಳೂರು, ಬೆಳಗಾವಿ, ಘಟಪ್ರಭಾ, ಹಾವೇರಿ, ಕಡೂರು, ಬೀರೂರು, ಹಾಸನ ಸೇರಿದಂತೆ ವಿವಿಧ ಭಾಗಗಳಿಂದ 86 ತಂಡಗಳು ಭಾಗವಹಿಸಲಿವೆ ಎಂದು ಅವರು ವಿವರಿಸಿದರು. ಸುದ್ದಿಗೋಷ್ಠಿಯಲ್ಲಿ ಸಮಿತಿಯ ಹೆಚ್.ಸಿ.ವೇದಮೂರ್ತಿ, ಲಿಂಗರಾಜ್ ಬಿ.ಕಲ್ಪನಳ್ಳಿ, ಅಜಿತ್‍ಕುಮಾರ್ ಎಸ್.ನ್ಯಾಮತಿ ಮತ್ತಿತರರು ಹಾಜರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link