ಸ್ಟೀಲ್ ಬ್ರಿಡ್ಜ್ ಯೋಜನೆ ಕಾರ್ಯ ರೂಪಕ್ಕೆ: ಡಿಸಿಎಂ

ಬೆಂಗಳೂರು 

      ವಿವಾದಿತ ಸ್ಟೀಲ್ ಬ್ರಿಡ್ಜ್ ಯೋಜನೆಗೆ ಸರ್ಕಾರ ಮರುಜೀವ ನೀಡಿದೆ. ಸ್ಟೀಲ್ ಬ್ರಿಡ್ಜ್ ಯೋಜನೆಯನ್ನು ಕೈಗೆತ್ತಿಕೊಳ್ಳುವುದಾಗಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

      ನಗರದಲ್ಲಿಂದು ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಅವರು, ಚಾಲುಕ್ಯ ಸರ್ಕಲ್ ನಿಂದ ಎಸ್ಟೀಮ್ ಮಾಲ್ ವರೆಗಿನ ಬ್ರಿಡ್ಜ್ ನಿರ್ಮಾಣಕ್ಕೆ ಸಿದ್ದರಾಮಯ್ಯ ಸರ್ಕಾರದಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು. ಆದರೆ ಡಿಪಿಆರ್ ಮುಗಿದು ಯೋಜನೆಗೆ ಮುಂದಾದಾಗ ವಿವಾದಕ್ಕೀಡಾಗಿದ್ದರಿಂದ ಬ್ರಿಡ್ಜ್ ಕಾರ್ಯ ಸ್ಥಗಿತಗೊಂಡಿತ್ತು.`ಆದರೆ ಇದೀಗ ಮತ್ತೆ ಯೋಜನೆಗೆ ಚಾಲನೆ ನೀಡಲು ಸರ್ಕಾರದಿಂದ ಚಿಂತನೆ ನಡೆಸಲಾಗಿದ್ದು, ಹಳೆಯ ಡಿಪಿಆರ್ ಪುನರ್ ಪರಿಶೀಲಿಸಿಲಿ ಕೆಲ ಬದಲಾವಣೆ ಮಾಡಲು ಸರ್ಕಾರ ನಿರ್ಧಾರ ಮಾಡಿದೆ ಎಂದರು.

       ಬಸವೇಶ್ವರ ವೃತ್ತದಿಂದ ಹೆಬ್ಬಾಳದ ವರೆಗೆ ಉಕ್ಕಿನ ಸೇತುವೆ ನಿರ್ಮಾಣ ಅನಿವಾರ್ಯ. ಯೋಜನೆ ಮರುಪರಿಶೀಲನೆ ಮಾಡಲು ತೀರ್ಮಾನಿಸಲಾಗಿದೆ.ಸಾರ್ವಜನಿಕರ ಅಭಿಪ್ರಾಯ ಪಡೆದು ಸರ್ಕಾರ ಈ ಬಗ್ಗೆ ಮುಂದಿನ ತೀರ್ಮಾನ ಕೈಗೊಳ್ಳಲಿದ್ದು, ಉತ್ತಮ ಅಭಿಪ್ರಾಯ ಬಂದರೆ ಯೋಜನೆಗೆ ಗ್ರೀನ್ ಸಿಗ್ನಲ್ ಸಿಗಲಿದೆ. ಕೇವಲ 20 ನಿಮಿಷದಲ್ಲಿ ಏರ್ ಪೋರ್ಟ್ ತಲುಪುವ ಅವಕಾಶ ಸಿಗಲಿದೆ ಎಂದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap