ವೈದ್ಯರ ಮೇಲೆ ಹಲ್ಲೆ ತಡೆಗೆ ಕ್ರಮ: ಶ್ರೀರಾಮುಲು

ಬೆಂಗಳೂರು

     ವೈದ್ಯರು ಸಾಕಷ್ಟು ಒತ್ತಡದಲ್ಲಿ ಕೆಲಸ ಮಾಡುತ್ತಿರುತ್ತಾರೆ. ಹಾಗಾಗಿ ಯಾವುದೇ ಸಂಘಟನೆಯವರು ವೈದ್ಯರ ಮೇಲೆ ಹಲ್ಲೆ ಮಾಡುವುದು ಸರಿಯಲ್ಲ. ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸುತ್ತೇವೆ. ವೈದ್ಯರು ಮುಷ್ಕರ ವಾಪಸ್ ಪಡೆಯುವಂತೆ ಆರೋಗ್ಯ ಮತ್ತುಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು ಮನವಿ ಮಾಡಿದ್ದಾರೆ.

      ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿಇಂದು ನಡೆದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮಿಂಟೋ ಆಸ್ಪತ್ರೆಯಲ್ಲಿ ನಡೆದ ಹಲ್ಲೆಪ್ರಕರಣದ ಬಗ್ಗೆ ವಿಷಾದ ವ್ಯಕ್ತಪಡಿಸುತ್ತೇನೆ. ಮುಂದಿನ ದಿನಗಳಲ್ಲಿ ವೈದ್ಯರ ಮೇಲೆ ಹಲ್ಲೆ ಮಾಡಿದವರ ಮೇಲೆ ಕಠಿಣಕ್ರಮ ಕೈಗೊಳ್ಳಲಾಗುವುದು. ಆಸ್ಪತ್ರೆಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸುವುದರ ಜೊತೆಗೆ ಮತ್ತೆ ಆಸ್ಪತ್ರೆಗಳಲ್ಲಿ ಖಾಸಗಿ ಸೆಕ್ಯೂರಿಟಿಗಾರ್ಡ್ ಗಳ ನೇಮಕದಜೊತೆಗೆ ಪೊಲೀಸ್ ಬಂದೋಬಸ್ತ್ ನ್ನೂಕಲ್ಪಿಸುವ ಬಗ್ಗೆ ಸಿಎಂ ಹಾಗೂ ಗೃಹ ಸಚಿವರಜೊತೆಚರ್ಚಿಸುವುದಾಗಿ ತಿಳಿಸಿದರು.

      ವೈದ್ಯರುತಮ್ಮ ಮುಷ್ಕರ ಹಿಂದೆ ಪಡೆಯಬೇಕೆಂದು ಮನವಿ ಮಾಡಿದ್ದೇನೆ. ವೈದ್ಯರಎಸ್ಮಾ ಕಾ0iÉ್ದುಯ ವ್ಯಾಪ್ತಿಯಲ್ಲಿ ಬರುತ್ತಾರೆ. ಈ ವಿಷಯವನ್ನೂ ಅವರಿಗೆ ಈಗಾಗಲೇ ಸೂಕ್ಷ್ಮವಾಗಿ ತಿಳಿಸಿದ್ದೇನೆ ಎಂದರು.ಆರೋಗ್ಯ ಮತ್ತುಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ನಡುವೆತಾರತಮ್ಯ ಹೆಚ್ಚಿದೆ. ವೈದ್ಯಕೀಯ ಶಿಕ್ಷಣ ಇಲಾಖೆ ಸಿಬ್ಬಂದಿಗೆ ವೇತನ ಹಾಗೂ ಸೌಲಭ್ಯಗಳು ಹೆಚ್ಚು. ಈ ತಾರತಮ್ಯ ಹೋಗಲಾಡಿಸಲುಎರಡೂ ಇಲಾಖೆಗಳನ್ನು ಒಂದುಗೂಡಿಸಿ ಒಂದೇ ಇಲಾಖೆಯಡಿ ತರುವುದು ಸೂಕ್ತ. ಈ ಬಗ್ಗೆ ಸಿಎಂ ಅವರ ಗಮನ ತಂದಿದ್ದೇನೆ. ವೈದ್ಯಕೀಯ ಶಿಕ್ಷಣ ಸಚಿವರಿಗೂ ಮನವಿ ಮಾಡಿದ್ದೇನೆಎಂದು ಹೇಳಿದರು.

      ಇನ್ನು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಅಗತ್ಯ ವಸತಿ ಹಾಗೂ ಗುಣಮಟ್ಟದ ಆಹಾರ ಕೊಡಲು ತೀರ್ಮಾನಿಸಲಾಗಿದೆ. 1 ರಿಂದ 7 ನೇ ತರಗತಿಯ ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯ ನೀಡಲು ನಿರ್ಧರಿಸಲಾಗಿದೆಎಂದು ತಿಳಿಸಿದರು.

      ಇಲಾಖೆಯಲ್ಲಿ ಹಣದ ಸಮಸ್ಯೆಇಲ್ಲ. 1363 ವಿದ್ಯಾರ್ಥಿ ನಿಲಯಗಳಿಗೆ ಸ್ವಂತಕಟ್ಟಡಇಲ್ಲ. ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಸ್ವಂತಕಟ್ಟಡ ನಿರ್ಮಾಣದ ಬಗ್ಗೆ ಅಗತ್ಯಕ್ರಮ ತೆಗೆದುಕೊಳ್ಳಲಾಗುವುದು. ಕ್ರೈಸ್ಟ್ ಸಂಸ್ಥೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಈ ಸಂಸ್ಥೆಗೆ 150 ಕಟ್ಟಡಗಳ ನಿರ್ಮಾಣದ ಹೊಣೆ ನೀಡಲಾಗಿತ್ತು. ಕಳೆದ ಐದು ವರ್ಷಗಳಿಂದ ಕಾಮಗಾರಿಗಳನ್ನು ಪೂರ್ಣಗೊಳಿಸುತ್ತಿಲ್ಲ. ಇದರಿಂದ ಕಾಮಗಾರಿಗಳು ಅಪೂರ್ಣಗೊಂಡಿವೆ. ಬಾಕಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಕ್ರೈಸ್ಟ್ ಸಂಸ್ಥೆಗೆ ಮನವಿ ಮಾಡುತ್ತೇನೆಎಂದರು.

       ಇದೇ ಸಂದರ್ಭದಲ್ಲಿ 2019-20 ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಡಿ.ದೇವರಾಜಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಯೋಜನೆಗಳ ಸಂಕ್ಷಿಪ್ತ ಮಾಹಿತಿ ಪುಸ್ತಕವನ್ನು ಶ್ರೀರಾಮುಲು ಅವರು ಬಿಡುಗಡೆ ಮಾಡಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap