ಹೊಸಪೇಟೆ :
ತಾಲೂಕಿನ ಕಮಲಾಪುರ ಪಟ್ಟಣದಲ್ಲಿ ಬಿಡಾಡಿ ದನಗಳ ಹೆಚ್ಚಾಗಿದ್ದು, ಸಾರ್ವಜನಿಕರಿಗೆ ತುಂಬಾ ಕಿರಿಕಿರಿಯಾಗುತ್ತಿದೆ.
ಪಟ್ಟಣದ ಮುಖ್ಯರಸ್ತೆಗಳಲ್ಲಿ, ಬೀದಿ ಬೀದಿಗಳಲ್ಲಿ ಬಿಡಾಡಿ ದನಗಳು ಹಿಂಡು ಹಿಂಡಾಗಿ ರಸ್ತೆಯಲ್ಲಿ ಮಲಗಿ ವಾಹನ ಸವಾರರಿಗೆ ಹಾಗು ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ.
ದನಗಳು ಒಂದಕ್ಕೊಂದು ಕಾಳಗವನ್ನು ಮಾಡುವಾಗ ಸಾರ್ವಜನಿಕರ ಮೇಲೆ ಹಾಗು ಸವಾರರ ಮೇಲೆ ಆಕ್ರಮಣ ಮಾಡಿದಾಗ ಅಪಘಾತಗಳಾಗುವ ಸಂಭವ ಹೆಚ್ಚಿದೆ. ಹೀಗಾಗಿ ಬಿಡಾಡಿ ದನಗಳ ಮಾಲೀಕರು 7 ದಿನದೊಳಗಡೆ ತಮ್ಮ ತಮ್ಮ ದನಗಳನ್ನು ಮನೆಯಲ್ಲಿ ಕಟ್ಟಿ ಹಾಕಿಕೊಳ್ಳಬೇಕು. ಇಲ್ಲವಾದರೆ ಕಾನೂನು ಪ್ರಕಾರ ಬಿಡಾಡಿ ದನಗಳನ್ನು ಗೋಶಾಲೆಗಳಿಗೆ ರವಾನಿಸಲಾಗುವುದು ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳು
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ