ಹೊಸಕೆರೆ : ಬೀದಿ ನಾಯಿ ಹಾವಳಿ ಹೆಚ್ಚಳ

ಎಂ ಎನ್ ಕೋಟೆ :

    ಗುಬ್ಬಿ ತಾಲ್ಲೂಕಿನ ಹಾಗಲವಾಡಿ ಹೋಬಳಿಯ ಹೊಸಕೆರೆಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು ಜನಸಾಮಾನ್ಯರು ಒಬ್ಬಂಟಿಯಾಗಿ ಓಡಾಡುವುದೇ ಕಷ್ಠಕರವಾಗಿದ್ದು ಗ್ರಾಮ ಪಂಚಾಯಿತಿ ಹಾಗೂ ಪಟ್ಟಣ್ಣ ಪಂಚಾಯಿತಿಯವರು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.ಬೀದಿ ಬೀದಿಗಳಲ್ಲಿ ತಿರುಗಾಡುತ್ತಿರುವ ಬೀದಿ ನಾಯಿಗಳ ಹಿಂಡು ವಾಹನ ಸವಾರರ ಮೇಲೆ ದಾಳಿ ಮಾಡುತ್ತೇವೆ.

   ಕೆಲ ನಾಯಿಗಳ ಹಿಂಡು ಬೈಕ್ ಹಾಗೂ ಕಾರ್ ಹಿಂದೆ ಓಡಿ ಬರುತ್ತಿರುವ ಪರಿಣಾಮ ವಾಹನ ಸವಾರರು ಆತಂಕ ಪಡಬೇಕಾಗುತ್ತದೆ. ಸಂಬಂಧ ಪಟ್ಟ ಅಧಿಕಾರಿಗಳು ಈ ನಾಯಿಗಳ ಹಾವಳಿಯನ್ನು ತಪ್ಪಿಸಬೇಕು ಎಂದು ಹೊಸಕೆರೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಪದೇ ಪದೇ ನಾಯಿಗಳ ಕಾಟ ಹೆಚ್ಚಾಗುತ್ತಿದ್ದು ಸಂಬಂಧಪಟ್ಟ ಅಧಿಕಾರಿಗಳು ಕುರುಡರ ರೀತಿ ವರ್ತಿಸುತ್ತಿದ್ದಾರೆ ಈಗಾಲಾದರೂ ನಾಯಿಗಳ ಕಾಟವನ್ನು ತಪ್ಪಿಸಿಬೇಕು ಎಂದು ಹೊಸಕೆರೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link