ಬೆಂಗಳೂರು
ನಗರದ ಹೊರವಲಯದ ಹೊಸಕೋಟೆ ಗೌತಮ್ ಕಾಲನಿಯಲ್ಲಿ ಅಂಗಡಿಗೆ ಹೋಗಿ ಮನೆಗೆ ನಡೆದುಕೊಂಡು ಬರುತ್ತಿದ್ದ 6 ವರ್ಷದ ಬಾಲಕಿಯ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿ, ಕಚ್ಚಿ ಗಂಭೀರ ಗಾಯಗೊಳಿಸಿವೆ.
ಹೊಸಕೋಟೆಯ ಓಂ ಶ್ರೀ ಶಾಲೆಯಲ್ಲಿ ಒಂದನೇ ತರಗತಿ ಓದುತ್ತಿರುವ ಮಾನಸ ನಿನ್ನೆ ಬೆಳಗ್ಗೆ ಶಾಲೆಗೆ ಬಂದು ಪರೀಕ್ಷೆ ಮುಗಿಸಿ ಹತ್ತಿರದ ಅಂಗಡಿಗೆ ತಿಂಡಿ ತರಲು ಹೋಗಿದ್ದಾಳೆ. ಇದೇ ವೇಳೆ ಅಲ್ಲಿದ್ದಂತಹ ಬೀದಿ ನಾಯಿಗಳು ದಾಳಿ ನಡೆಸಿ ಮಾನಸಾಳ ತೊಡೆ ಸೇರಿದಂತೆ ದೇಹದ ನಾನಾ ಕಡೆ ಮನಬಂದಂತೆ ಕಚ್ಚಿವೆ.
ಬಾಲಕಿಯ ಚೀರಾಟ ಕೇಳಿ ಸ್ಥಳೀಯರು ಧಾವಿಸಿ ಬೀದಿ ನಾಯಿಗಳನ್ನು ಓಡಿಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಮಾನಸಾಳನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಈಗ ದಾಖಲು ಮಾಡಲಾಗಿದೆ. ಹೊಸಕೋಟೆ ನಿವಾಸಿಗಳು ಸಾಕಷ್ಟು ಬಾರಿ ಮನವಿ ಮಾಡಿಕೊಂಡರೂ ಬೀದಿ ನಾಯಿಗಳ ನಿಯಂತ್ರಣಕ್ಕೆ ನಗರಸಭೆ ಕಡಿವಾಣ ಹಾಕಿಲ್ಲ. ಇನ್ನಾದರೂ ಈ ಪ್ರಕರಣದಿಂದ ಎಚ್ಚೆತ್ತು ನಗರಸಭೆ ಬೀದಿನಾಯಿಗಳ ನಿಯಂತ್ರಣಕ್ಕೆ ಕಡಿವಾಣ ಹಾಕಬೇಕಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ