ಸೊರಗುತ್ತಿರುವ ಶಾಲೆಗಳ ಬಲವರ್ಧನೆ ಅತ್ಯವಶ್ಯ

ದಾವಣಗೆರೆ:

        ಸರ್ಕಾರಿ ಪ್ರಾಥಮಿಕ ಶಾಲೆಗಳು ಮೂಲಭೂತ ಸೌಕರ್ಯಗಳ ಕೊರತೆಯಿಂದ ಸೊರಗುತ್ತಿದ್ದು, ಅವುಗಳನ್ನು ಬಲವರ್ಧನೆಗೊಳಿಸುವ ಅವಶ್ಯಕತೆ ಇದೆ ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಾಬಪ್ಪ ಹೇಳಿದರು.

         ತಾಲೂಕಿನ ನರಗನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಮಾತನಾಡಿದ ಅವರು, ಬಹುತೇಕ ಕಡೆ ಕಟ್ಟಡಗಳು ಶಿಥಿಲಗೊಂಡಿದ್ದು, ಮೂಲಭೂತ ಸೌಲಭ್ಯಗಳಾದ ಶೌಚಾಲಯ, ನೀರಿನ ವ್ಯವಸ್ಥೆ, ಮಕ್ಕಳು ಕುಳಿತುಕೊಳ್ಳಲು ಬೇಕಾದ ಆಸನಗಳ ಕೊರತೆ ಎದ್ದು ಕಾಣುತ್ತಿದೆ. ಇವುಗಳ ಬಗ್ಗೆ ಸಂಪೂರ್ಣ ವರದಿ ತಯಾರಿಸಿ, ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಮೂಲಕ ರಾಜ್ಯ ಉಚ್ಛ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ಹೇಳಿದರು.

        ಶತಮಾನದ ಹೊಸ್ತಿಲಿನಲ್ಲಿರುವ ನರಗನಹಳ್ಳಿ ಶಾಲೆಯು ಸಂಪೂರ್ಣ ಶಿಥಿಲಾವಸ್ಥೆಯಲ್ಲಿದ್ದು, ಅವುಗಳನ್ನು ಕೆಡವಿ ಹೊಸ ಕಟ್ಟಡಗಳನ್ನು ಕಟ್ಟುವ ಅವಶ್ಯಕತೆ ಇದೆ. ಈ ಬಗ್ಗೆ ವಸ್ತುಸ್ಥಿತಿಯನ್ನು ವರದಿಯಲ್ಲಿ ತಿಳಿಸಲಾಗುವುದು ಎಂದರು.

         ಹಿರಿಯ ಸಿವಿಲ್ ನ್ಯಾಯಾಧೀಶ ಕೆ.ಸೋಮಶೇಖರ್ ಮಾತನಾಡಿ, ದೇಶದ ಬಹುತೇಕ ಮೇಧಾವಿಗಳು ಗ್ರಾಮೀಣ ಪ್ರದೇಶದಿಂದ ಬಂದವರಾಗಿದ್ದು, ಗ್ರಾಮೀಣ ಶಾಲೆಗಳನ್ನು ಉಳಿಸುವ ಮೂಲಕ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕಿದೆ. ಆದರೆ ಇಂದು ನಾಯಿಕೊಡೆಗಳಂತೆ ಖಾಸಗಿ ಶಾಲೆಗಳು ತಲೆಎತ್ತುತ್ತಿದ್ದು, ಸರ್ಕಾರಿ ಶಾಲೆಗಳು ಮೂಲಭೂತ ಸೌಲಭ್ಯಗಳಿಲ್ಲದೇ, ಶಿಕ್ಷಕರ ಕೊರತೆಯಿಂದ ಪ್ರಾಠ ಪ್ರವಚನಗಳು ಸರಿಯಾಗಿ ನಡೆಯದೇ ಪೋಷಕರು ಖಾಸಗಿ ಶಾಲೆಗಳತ್ತ ಮುಖ ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರಿ ಶಾಲೆಗಳನ್ನು ಉಳಿಸದೇ ಹೋದಲ್ಲಿ ಶಿಕ್ಷಣ ಅತ್ಯಂತ ದುಬಾರಿಯಾಗಿ, ಬಡವರ ಕೈಗೆಟುಕದಂತಾಗಲಿದೆ ಎಂದು ಸೂಚ್ಯವಾಗಿ ಎಚ್ಚರಿಸಿದರು.

        ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಎಲ್.ಹೆಚ್.ಅರುಣ್‍ಕುಮಾರ್ ಮಾತನಾಡಿ, ನರಗನಹಳ್ಳಿ ಪ್ರಾಥಮಿಕ ಶಾಲೆಯು ಉತ್ತಮ ಶಿಕ್ಷಕರ ಬೋಧನೆಯಿಂದಾಗಿ ಉತ್ತಮ ನಾಗರೀಕರನ್ನು ನಿರ್ಮಾಣ ಮಾಡಿದ್ದು, ಇಲ್ಲಿಯ ವಿದ್ಯಾರ್ಥಿಗಳು ವಿದೇಶಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಸಾಂಸ್ಕತಿಕ ಕಾರ್ಯಕ್ರಮಗಳಲ್ಲೂ ಸಹ ಮೇಲುಗೈ ಸಾಧಿಸಿದ್ದಾರೆ. ಒಂದು ಕಾಲಕ್ಕೆ 750 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದ ಶಾಲೆಯಲ್ಲಿ ಈಗ ಕೇವಲ 150 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವುದು. ಇಂದಿನ ಪರಿಸ್ಥಿತಿಗೆ ಕೈಗನ್ನಡಿಯಾಗಿದೆ ಎಂದು ಹೇಳಿದರು.

          ಈ ಸಂದರ್ಭದಲ್ಲಿ ನರಗನಹಳ್ಳಿ ಸರ್ಕಾರಿ ಶಾಲೆಯ ಎಸ್‍ಡಿಎಂಸಿ ಮಾಜಿ ಅಧ್ಯಕ್ಷ ಎನ್.ಪಿ.ನಾಗರಾಜ್, ವಿಎಸ್‍ಎಸ್‍ಎನ್‍ನ ಮಾಜಿ ಅಧ್ಯಕ್ಷ ಎನ್.ಜಯಪ್ಪ, ಎಸ್‍ಡಿಎಂಸಿ ಅಧ್ಯಕ್ಷ ಎನ್.ಆರ್.ಅಣ್ಣೇಶಪ್ಪ, ಗ್ರಾಮದ ಮುಖಂಡರಾದ ಹೆಚ್.ಚನ್ನಪ್ಪ, ಎನ್.ಕೆ.ನಾಗರಾಜ್, ಎನ್.ಆರ್.ತಿಪ್ಪೇಸ್ವಾಮಿ, ಹೆಚ್.ಪರಮೇಶ್ವರಪ್ಪ, ಎನ್.ಜಿ.ಗುರುದೇವ್, ಎನ್.ಜಿ.ಅರವಿಂದ್, ಎನ್.ಆರ್.ರುದ್ರೇಶ್, ಮಂಡಲೂರು ಬಸವಂತಪ್ಪ, ಸಿ.ಎಂ.ಶಿವಯೋಗಿ, ನಾಗರಸನಹಳ್ಳಿ ಪ್ರಕಾಶ್, ಎನ್.ಆರ್.ಕೃಷ್ಣರಾಜ್, ಮುಖ್ಯ ಶಿಕ್ಷಕ ಯಲ್ಲಪ್ಪ ಕಡೇಮನಿ, ಶಿಕ್ಷಕರಾದ ಪ್ರಕಾಶ್ ಕೊಡಗನೂರು, ಬಿ.ಎಂ.ಮಂಜುಳಮ್ಮ, ಯು.ಅರುಣಾದೇವಿ, ಆರ್.ಶ್ಯಾಮಲ, ಕೆ.ಶಶಿಕಲಾ ಮತ್ತಿತರರಿದ್ದರು.

ಚಿನ್ನಸಮುದ್ರ ಶಾಲೆಗೂ ಭೇಟಿ:

      ದಾವಣಗೆರೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಹಿರಿಯ ಸಿವಿಲ್ ನ್ಯಾಯಾಧೀಶರಾದ ಸಾಬಪ್ಪ, ಹಿರಿಯ ಸಿವಿಲ್ ನ್ಯಾಯಾಧೀಶ ಸೋಮಶೇಖರ್, ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಎಲ್.ಹೆಚ್.ಅರುಣ್‍ಕುಮಾರ್ ತಾಲೂಕಿನ ಚಿನ್ನಸಮುದ್ರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ಪರಿಶೀಲಿಸಿದರು.

        ಈ ಸಂದರ್ಭದಲ್ಲಿ ನೇರ್ಲಿಗೆ ಗ್ರಾಮಪಂಚಾಯತಿ ಅಧ್ಯಕ್ಷೆ ಅಕ್ಕಮಹಾದೇವಿ, ರಾಜ್ಯ ರೈತಸಂಘದ ಜಿಲ್ಲಾ ಕಾರ್ಯದರ್ಶಿ ಚಿನ್ನಸಮುದ್ರ ಶೇಖರ್ ನಾಯ್ಕ, ಗ್ರಾಂಪಂ ಸದಸ್ಯ ಡಿ.ಮಂಜಾನಾಯ್ಕ, ಶ್ರೀಧರ ಸಿ.ಎಸ್., ಎಸ್‍ಡಿಎಂಸಿ ಅಧ್ಯಕ್ಷ ಕಾಶೀನಾಥ್, ಮುಖ್ಯಶಿಕ್ಷಕರಾದ ಪೂರ್ಣಿಮಾ, ಭೀಮಾ ನಾಯ್ಕ ಮತ್ತಿತರರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link
Powered by Social Snap