ಬೆಂಗಳೂರು
ಕೋವಿಡ್-19 ನಿಂದಾಗಿ ಕಳೆದ 3 ತಿಂಗಳಿನಿಂದ ಕೆಲಸಕ್ಕೆ ಹಾಜರಾಗದ 150 ಜನ ಹಾಪ್ ಕಾಮ್ಸ್ ನೌಕರರ ವಿರುದ್ಧ ಪರಿಶೀಲನೆ ನಡೆಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಇಂದು ಸಿಎಂ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಕೃಷಿ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.ತೋಟಗಾರಿಕೆ ಹಾಗೂ ರೇಷ್ಮೆ ಸಚಿವ ಕೆ.ನಾರಾಯಣಸ್ವಾಮಿ, ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್ ಪ್ರಸಾದ್, ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ ಉಪಸ್ಥಿತರಿದ್ದರು.
ರಾಜ್ಯದ 550 ಹಾಪ್ ಕಾಮ್ಸ್ ಮಳಿಗೆಗಳ ಪೈಕಿ ಕೇವಲ 250 ಮಳಿಗೆಗಳು ಮಾತ್ರ ಕಾರ್ಯನಿರ್ವಹಿಸುತ್ತಿದ್ದು, ಮಳಿಗೆ ತೆರೆಯದೇ ಇರುವವರ ವಿರುದ್ಧ ಶಿಸ್ತಿನ ಕ್ರಮ ಜರುಗಿಸಬೇಕೆಂದು ಸಿಎಂ ಯಡಿಯೂರಪ್ಪ ಸೂಚಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








